ಬೆಂಗಳೂರು:ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ನೈಋತ್ಯ ರೈಲ್ವೆಯು ಬೆಂಗಳೂರಿನ ಯಶವಂತಪುರ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರಸ್ ರೈಲನ್ನು ಓಡಿಸಲು ನಿರ್ಧರಿಸಿದೆ.
ಫೆಬ್ರವರಿ 13ರಂದು ರೈಲು ಸಂಖ್ಯೆ 06209 ಯಶವಂತಪುರ-ಕಲಬುರಗಿ ವಿಶೇಷ ಎಕ್ಸ್ ಪ್ರಸ್ ರೈಲು ಯಶವಂತಪುರದಿಂದ ರಾತ್ರಿ 10:40ಕ್ಕೆ ಹೊರಟು, ಮರುದಿನ ಬೆಳಗ್ಗೆ 9:15ಕ್ಕೆ ಕಲಬುರಗಿ ತಲುಪಲಿದೆ.ಹಿಂದಿರುಗುವ ಪ್ರಯಾಣದಲ್ಲಿ ಫೆಬ್ರವರಿ 14ರಂದು ರೈಲು ಸಂಖ್ಯೆ 06210 ಕಲಬುರಗಿ-ಯಶವಂತಪುರ ವಿಶೇಷ ಎಕ್ಸ್ ಪ್ರಸ್ ರೈಲು ಕಲಬುರಗಿಯಿಂದ ಬೆಳಗ್ಗೆ 10:15ಕ್ಕೆ ಹೊರಟು ಅದೇ ದಿನ ರಾತ್ರಿ 9:40ಕ್ಕೆ ಯಶವಂತಪುರ ತಲುಪಲಿದೆ.
ಈ ವಿಶೇಷ ಎರಡೂ ಮಾರ್ಗಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಹಾಗೂ ಶಹಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಈ ವಿಶೇಷ ರೈಲು ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ ಒಂದು ಪ್ರಥಮ ದರ್ಜೆ ಎಸಿ ಹಾಗೂ ಎಸಿ-2 ಟೈರ್ (ಸಂಯೋಜಿತ), 2 ಎಸಿ-3 ಟೈರ್, 10 ಸ್ಲಿಪರ್‌ಕ್ಲಾಸ್, 5 ಸಾಮಾನ್ಯ ದ್ವಿತೀಯ ದರ್ಜೆ ಹಾಗೂ 2 ಎಸ್‌ಎಲ್‌ಆರ್‌ಬೋಗಿಗಳು ಇರಲಿವೆ.



