Saturday, February 14, 2026
Google search engine

Homeರಾಜ್ಯಬೈರತಿ ಬಸವರಾಜುಗೆ ಹೃದಯ ಸಮಸ್ಯೆ ; ಆಸ್ಪತ್ರೆಗೆ ದಾಖಲು

ಬೈರತಿ ಬಸವರಾಜುಗೆ ಹೃದಯ ಸಮಸ್ಯೆ ; ಆಸ್ಪತ್ರೆಗೆ ದಾಖಲು

ಬೆಂಗಳೂರು : ಭಾರತಿ ನಗರದ ರೌಡಿ ಶಿವಪ್ರಕಾಶ್ ಆಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜು ಅವರನ್ನು ಬಂಧಿಸಲಾಗಿತ್ತು. ಇದೀಗ ಹೃದಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ನ್ಯಾಯಾಲಯದ ಸೂಚನೆಯಂತೆ ಅವರನ್ನು ಶುಕ್ರವಾರ ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಗುರುವಾರ ಸಂಜೆ ಬಂಧನಕ್ಕೊಳಗಾಗಿದ್ದ ಬೈರತಿ ಬಸವರಾಜುರನ್ನು ಸಿಐಡಿ ಅಧಿಕಾರಿಗಳು, ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ಜನಪ್ರ ತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹಾಜರುಪಡಿಸಿದರು. ಆಗ ಬೌರಿಂಗ್ ಆಸ್ಪತ್ರೆ ವೈದ್ಯರ ವರದಿಯಲ್ಲಿ ಇಸಿಜಿಯಲ್ಲಿ ವ್ಯತ್ಯಾಸ ಉಲ್ಲೇಖವಾಗಿದ್ದು, ಈ ಸಂಗತಿಯನ್ನು ನ್ಯಾಯಾಲಯದ ಗಮನಕ್ಕೆ ತಂದು ಹೆಚ್ಚಿನ ಚಿಕಿತ್ಸೆಗೆ ಶಾಸಕರ ಪರ ವಕೀಲರು ಮನವಿ ಮಾಡಿದರು.

ಈ ಮನವಿ ಪುರಸ್ಕರಿಸಿದ ನ್ಯಾಯಾಲಯ, ಆರೋಪಿ ಬಸವರಾಜು ಅವರಿಗೆ ಹೆಚ್ಚಿನ ಚಿಕಿತ್ಸೆ ಕೊಡಿಸಿ ಶನಿವಾರ ಗೃಹ ಕಚೇರಿಯಲ್ಲಿ ಹಾಜರುಪಡಿಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿತು.

ಅಂತೆಯೇ ರಾತ್ರಿ 7 ಗಂಟೆಗೆ ಸುಮಾರಿಗೆ ಜಯನಗರದ 9ನೇ ಹಂತದಲ್ಲಿರುವ ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಾಸಕರನ್ನು ಕರೆದೊಯ್ದು ಅಧಿಕಾರಿಗಳು ದಾಖಲಿಸಿದ್ದಾರೆ. ಪ್ರಸುತ್ತ ವೈದ್ಯೋಪಚಾರಕ್ಕೆ ಶಾಸಕರು ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES
- Advertisment -
Google search engine

Most Popular