Saturday, February 14, 2026
Google search engine

Homeರಾಜ್ಯಗ್ಯಾಸ್ ಸೋರಿಕೆ: ಬೆಳ್ತಂಗಡಿಯಲ್ಲಿ ಅಂಗಡಿ ಭಸ್ಮ

ಗ್ಯಾಸ್ ಸೋರಿಕೆ: ಬೆಳ್ತಂಗಡಿಯಲ್ಲಿ ಅಂಗಡಿ ಭಸ್ಮ

ಹೀಲಿಯಂ ಗ್ಯಾಸ್ ಸೋರಿಕೆಯಿಂದ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯಲ್ಲಿದ್ದ ಕ್ರಿಯೇಟಿವ್ ಅರ್ಟ್ & ಕ್ರಾಫ್ಟ್ ಸ್ಟೋರ್ ನಲ್ಲಿ ಇಬ್ಬರು ಕೆಲಸದವರು ಇಂದು ಬೆಳಿಗ್ಗೆ ಕಾರ್ಯಕ್ರಮವೊಂದಕ್ಕೆ ಬಲೂನ್ ಗಳಿಗೆ ಗ್ಯಾಸ್ ತುಂಬಿಸುವಾಗ ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬೆಂಕಿ ಉಂಟಾಗಿ ಸಂಪೂರ್ಣ ಸುಟ್ಟು ಹೋಗಿದೆ.
ಘಟನೆ ವೇಳೆ ಅಂಗಡಿಯೊಳಗೆ ಇಬ್ಬರು ಕೆಲಸದವರು ಇದ್ದು ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಬೆಂಕಿ ಕೆನ್ನಲಿಗೆ ಅಕ್ಕಪಕ್ಕದ ಶಾಪ್ ಗಳಿಗೂ ಹಾನಿಯಾಗಿದೆ. ಗ್ಯಾಸ್ ಸೋರಿಕೆಯಿಂದ ಯಾವುದೇ ಬಹು ದೊಡ್ಡ ಅನಾಹುತ ಉಂಟಾಗಿಲ್ಲ.
ಘಟನೆಯನ್ನು ನೋಡಲು ನೂರಾರು ಮಂದಿ ಜಾಮಾಯಿಸಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯಾಗಿದ್ದು ತಕ್ಷಣ ಬೆಳ್ತಂಗಡಿ ಪೊಲೀಸರು ಮತ್ತು ಸಂಚಾರಿ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದೆ ವೇಳೆ ಬೆಂಕಿ ಹೊತ್ತುವ ಘಟನೆಯನ್ನು ನೋಡುತ್ತಿದ್ದ ಶಾಪ್ ಕೆಲಸದಾಕೆ ಮೂರ್ಛೆ ಹೋದ ಘಟನೆ ನಡೆಯಿತು ಬಳಿಕ ಸ್ಥಳೀಯರೆಲ್ಲ ಸೇರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

RELATED ARTICLES
- Advertisment -
Google search engine

Most Popular