Tuesday, February 17, 2026
Google search engine

Homeಸ್ಥಳೀಯಕ್ಯಾನ್ಸರ್ ವದಂತಿ ಸುಳ್ಳು ನಂದಿನಿ ಗುಣಮಟ್ಟದಲ್ಲಿ ರಾಜಿ ಇಲ್ಲ: ಡಿ.ಕೆ.ಸುರೇಶ್

ಕ್ಯಾನ್ಸರ್ ವದಂತಿ ಸುಳ್ಳು ನಂದಿನಿ ಗುಣಮಟ್ಟದಲ್ಲಿ ರಾಜಿ ಇಲ್ಲ: ಡಿ.ಕೆ.ಸುರೇಶ್

ಬೆಂಗಳೂರು : ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಸರಿ ಇಲ್ಲ, ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುವುದಾಗಿ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಾರೆ.

ನಂದಿನಿ ಉತ್ಪನ್ನ ಬಳಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಂದಿನಿ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ನಂದಿನಿ ಉತ್ಪನ್ನಗಳನ್ನು ಮಾಡುವಾಗ ಯಾವುದೇ ರೀತಿಯ ಕಲಬೆರಕೆ ಮಾಡುವುದಿಲ್ಲ. ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿರುತ್ತಾರೆ. ಈ ಬಗ್ಗೆ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ ಮಾಡಿ, ತೀರ್ಮಾನ ಮಾಡುತ್ತೇವೆ ಎಂದಿದ್ದಾರೆ. 

ಖಾಸಗಿ ಕಂಪನಿಗಳು ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರಾ ಎಂದು ಪ್ರಶ್ನೆಗೆ ಉತ್ತರಿಸಿದ ಅವರು, ಖಾಸಗಿಯವರು, ಬೇರೆಯವರು ಮಾಡಿಸುತ್ತಿರಬಹುದು. ನಾವು ಖಾಸಗಿಯವರ ಜೊತೆ ಸ್ಪರ್ಧೆ ಮಾಡಬೇಕಾದಾಗ ಅಪಪ್ರಚಾರ ಮಾಡುವುದು ಸಹಜ. ನಂದಿನಿ ಯಾವತ್ತೂ ಗುಣಮಟ್ಟದ ಜೊತೆ ರಾಜಿಯಾಗಿಲ್ಲ. ನಂದಿನಿಗೆ ಎಷ್ಟೇ ನಷ್ಟವಾದರೂ ಎಂದಿಗೂ ಗ್ರಾಹಕರಿಗೆ ಹಾಗೂ ರೈತರಿಗೆ ಅನ್ಯಾಯ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ. ಗುಣಮಟ್ಟದ ಉತ್ಪನ್ನಗಳನ್ನು ಮುಂದೆಯೂ ನೀಡಲಿದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular