Tuesday, February 17, 2026
Google search engine

Homeಸ್ಥಳೀಯಶಿಶು ಮರಣ ಪ್ರಮಾಣ ಶೂನ್ಯ ಗೊಳಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತರಾಗಿ- ಯುಕೇಶ್ ಕುಮಾರ್

ಶಿಶು ಮರಣ ಪ್ರಮಾಣ ಶೂನ್ಯ ಗೊಳಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತರಾಗಿ- ಯುಕೇಶ್ ಕುಮಾರ್

ಮೈಸೂರು: ಜನವರಿ 2025 ರಿಂದ ಡಿಸೆಂಬರ್-2025 ರ ಅಂತ್ಯಕ್ಕೆ ಒಟ್ಟು 09 ತಾಯಿ ಮರಣ ಪ್ರಕರಣ ಸಂಭವಿಸಿದ್ದು, ರಾಜ್ಯ ಮಟ್ಟದ ಸರಾಸರಿ ಶೇ.69 ರಷ್ಟು ಪ್ರಮಾಣದಲ್ಲಿದ್ದು ಜಿಲ್ಲೆಯ ತಾಯಿ ಮರಣ ಪ್ರಮಾಣ ಶೇ.32.2 ರಷ್ಟಿದ್ದು, ಇಳಿಮುಖವಾಗಿರುವುದು ಕಂಡು ಬಂದಿದೆ. ಡಿಸೆಂಬರ್-2025 ರ ಅಂತ್ಯಕ್ಕೆ 311 ಶಿಶು ಮರಣ ಪ್ರಕರಣಗಳು ಸಂಭವಿಸಿರುತ್ತದೆ. ಪ್ರಸ್ತುತ ರಾಜ್ಯ ಮಟ್ಟದಲ್ಲಿ ಸರಾಸರಿ 19 ರಷ್ಟ್ರು ಪ್ರಮಾಣದಲ್ಲಿದ್ದು, ಜಿಲ್ಲೆಯ ಶಿಶು ಮರಣ ಪ್ರಮಾಣ ಸರಾಸರಿ 11.1 ರಷ್ಟು ಈ ಪ್ರಮಾಣವನ್ನು ಶೂನ್ಯ ಪ್ರಮಾಣಕ್ಕೆ ತರುವ ನಿಟ್ಟಿನಲ್ಲಿ ಕಾರ್ಯ ಪ್ರವೃತರಾಗುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್ ಅವರು ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ “ಮಿನಿ” ಸಭಾಂಗಣದಲ್ಲಿ 2025-26 ನೇ ಸಾಲಿನ ಜಿಲ್ಲಾ ಆರೋಗ್ಯ ಸೊಸೈಟಿ ಸಭೆ ಜನವರಿ-2026 ರ ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಪೌಷ್ಟಿಕ ಮಕ್ಕಳ ಗುರುತಿಸುವಿಕೆ ಮತ್ತು ಅಪೌಷ್ಟಿಕ ಮಕ್ಕಳನ್ನು ಎನ್.ಆರ್.ಸಿ ಕೇಂದ್ರಗಳಿಗೆ ದಾಖಲೀಕರಣ ಮಾಡುವ ನಿಟ್ಟಿನಲ್ಲಿ ಆರ್.ಬಿ.ಎಸ್.ಕೆ ವೈದ್ಯರ ತಂಡದ ಮಹತ್ವದ ಬಗ್ಗೆ ಪರಿಶೀಲನೆ ನಡೆಸಿದರು.

ಕಾಯಕಲ್ಪ ಕಾರ್ಯಕ್ರಮದಡಿಯಲ್ಲಿ ರಾಷ್ಟ್ರೀಯ ಮಾನ್ಯತೆಗೆ ಅರ್ಹತೆ ಪಡೆದಿದ್ದು, ಅದರಂತೆ ಮೈಸೂರು-27, ನಂಜನಗೂಡು-06, ಪಿರಿಯಾಪಟ್ಟಣ-08, ಟಿ.ನರಸೀಪುರ-32, ಹೆಚ್.ಡಿ.ಕೋಟೆ-07, ಹುಣಸೂರು-16 ಮತ್ತು ಕೆ.ಆರ್.ನಗರ-27 ಒಟ್ಟು 123 ಆರೋಗ್ಯ ಕೇಂದ್ರಗಳು ರಾಷ್ಟ್ರಿಯ ಪ್ರಮಾಣೀಕರಣಕ್ಕೆ ಅರ್ಹತೆ ಪಡೆದಿರುವ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳು ಪ್ರಶಸ್ತಿಗೆ ಭಾಜನರಾಗುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಲು ಕ್ರಮವಹಿಸುವಂತೆ ತಿಳಿಸಿದರು.

ಗೃಹ ಆರೋಗ್ಯ ಕಾರ್ಯಕ್ರಮವನ್ನು ನಗರ ಪ್ರದೇಶಕ್ಕೆ ವಿಸ್ತರಿಸುತ್ತಿರುವ ಬಗ್ಗೆ ಮಾಹಿತಿ ನೀಡಿ ಸದರಿ ಕಾರ್ಯಕ್ರಮ ಪೂರ್ವ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರದ ಮಾರ್ಗಸೂಚಿ ಅನುಸಾರ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಸೂಚಿಸಿದರು.

ತಾಯಿ ಆರೋಗ್ಯ, ಮಕ್ಕಳ ಆರೋಗ್ಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮಗಳಲ್ಲಿ ಹಾಗೂ ಸಮುದಾಯ ಮಟ್ಟದಲ್ಲಿ ಬಾಲ್ಯ ವಿವಾಹ, ಭ್ರೂಣ ಲಿಂಗ ಪತ್ತೆ ಮತ್ತು ಪೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಲು ತಿಳಿಸಿದರು.

ಆರೋಗ್ಯ ಕೇಂದ್ರಗಳಲ್ಲಿ ಗರ್ಭಿಣಿ ದಾಖಲಾತಿ ಮತ್ತು ನೋಂದಣಿ, ಸಾಂಸ್ಥಿಕ ಹೆರಿಗೆಗಳ ನಿರ್ವಹಣೆ, ಜೆ.ಎಸ್.ವೈ ಯೋಜನೆಯಲ್ಲಿ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಸೇವಾ ಸಿಂಧೂ ತಂತ್ರಾಂಶದಲ್ಲಿ ದಾಖಲಿಕರಣ ಮಾಡುವುದು. PMSMA ಮತ್ತು e-PMSMA ಕಾರ್ಯಕ್ರಮದಲ್ಲಿ ಗರ್ಭಿಣಿ ಮಹಿಳೆಯರು ಮತ್ತು ಹೆಚ್.ಆರ್.ಪಿ ಗರ್ಭಿಣಿ ಮಹಿಳೆಯರು ಹಾಗೂ ಬಾಣಂತಿಯರ ಆರೋಗ್ಯ ತಪಾಸಣೆ ಒಳಪಡಿಸಿರುವುದು ಮತ್ತು ಈ ಬಗ್ಗೆ ತಂತ್ರಾಂಶದಲ್ಲಿ ಇಂದೀಕರಿಸಿರುವ ಮಾಹಿತಿ, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪರಿಶೀಲನೆ ಲಸಿಕಾ ವಂಚಿತ ಮಕ್ಕಳ ಪಟ್ಟಿ ಮತ್ತು ಲಸಿಕೆ ಪಡೆದು ಫಲಾನುಭವಿಗಳ ಮಾಹಿತಿಯನ್ನು U-win ತಂತ್ರಾಂಶದಲ್ಲಿ ದಾಖಲಿಕರಣ ಮಾಡುವುದು ಹಾಗೂ ಎಂ.ಆರ್ ಲಸಿಕೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರಗತಿ ಸಾಧಿಸುವ ಮೂಲಕ ದಡಾರ-ರುಬೆಲ್ಲಾ ರೋಗ ನಿರ್ಮೂಲನೆಗೆ ಕ್ರಮವಹಿಸಲು ತಿಳಿಸಿದರು.

ಮಕ್ಕಳ ಆರೋಗ್ಯದಲ್ಲಿ HBNC, HBYC ಕಾರ್ಯಚಟುವಟಿಕೆ ಪರಿಶೀಲನೆ ನಡೆಸಲಾಯಿತು. ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಶಾಶ್ವತ ಮತ್ತು ತಾತ್ಕಾಲಿಕ ಕುಟುಂಬ ಯೋಜನೆಗಳ ಬಗ್ಗೆ ಪರಿಶೀಲಿಸುತ್ತಾ, ಅಂತರ ಬಳಕೆ, ಸಂತಾನಹರಣ ಶಸ್ತ್ರಚಿಕಿತ್ಸೆ, ಪಿಪಿಐಯುಸಿಡಿ ಕಾರ್ಯಕ್ರಮಗಳು ಮತ್ತು ಕಾಯಕಲ್ಪ ಕಾರ್ಯಕ್ರಮದಡಿಯಲ್ಲಿ ಪ್ರಗತಿಯು ಕುಂಠಿತವಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಾ, ಕಾಯಕಲ್ಪ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳು ಪ್ರಶಸ್ತಿಗೆ ಭಾಜನರಾಗುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಲು ಕ್ರಮವಹಿಸುವಂತೆ ತಿಳಿಸಿದರು.
.
ಎನ್.ಸಿ.ಡಿ ಕಾರ್ಯಕ್ರಮದಡಿಯಲ್ಲಿ ಸಿ-ಬ್ಯಾಕ್ ಕಾರ್ಯಚಟುವಟಿಕೆಯ ಸಮೀಕ್ಷೆ ಮತ್ತು ಸ್ಕ್ರೀನಿಂಗ್ ಹಾಗೂ ಎನ್.ಸಿ.ಡಿ ಕಾರ್ಯಕ್ರಮ ಫಾಲೋಆಫ್ ಗಳು ಬಗ್ಗೆ ಪರಿಶೀಲನೆ ನಡೆಸಲಾಯಿತು. 2025-26ನೇ ಸಾಲಿನ ಆರ್ಥಿಕ ವರ್ಷದ ಅಂತಿಮ ಹಂತದಲ್ಲಿರುವುದರಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಿಗೆ ನಿಗದಿ ಪಡಿಸಿರುವ ಮಾರ್ಗಸೂಚಿ ಅನುಸಾರ, ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಕ್ರಿಯಾ ಯೋಜನೆಯ ರೂಪುರೇಷೆ ತಯಾರಿಸಿ ಆ ಮೂಲಕ ಪರಿಣಾಮಕಾರಿಯಾಗಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿ, ಶೇಕಡಾ 100 ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಲು ಕಟ್ಟುನಿಟ್ಟಾಗಿ ಸೂಚನೆ ನೀಡಲಾಯಿತು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರ ಡಾ: ಕುಮಾರಸ್ವಾಮಿ ಪಿ.ಸಿ, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಚೆಲುವಾಂಬ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಎಲ್ಲಾ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ತಾಲ್ಲೂಕು ಮತ್ತು ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular