Monday, February 23, 2026
Google search engine

HomeUncategorizedರಾಷ್ಟ್ರೀಯಬಂಗಾಳದ 'ರಾಜಕೀಯ ಚಾಣಕ್ಯ' ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಬಂಗಾಳದ ‘ರಾಜಕೀಯ ಚಾಣಕ್ಯ’ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ ಅವರ ಅತ್ಯಂತ ವಿಶ್ವಾಸಾರ್ಹ ಸಹಚರ ಮತ್ತು All India Trinamool Congress (ಟಿಎಂಸಿ) ಯ ಪ್ರಮುಖ ತಂತ್ರಜ್ಞರಾಗಿದ್ದ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ಮಗ ಸುಭ್ರಂಶು ರಾಯ್ ಸೇರಿದಂತೆ ಕುಟುಂಬಸ್ಥರನ್ನು ಅವರು ಅಗಲಿದ್ದಾರೆ.

ಸಾಲ್ಟ್ ಲೇಕ್ನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗಿನ ಜಾವ ಸುಮಾರು 1.30ರ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಕಳೆದ ಎರಡು ವರ್ಷಗಳಿಂದ ಹಲವು ಕಾಯಿಲೆಗಳಿಂದ ಬಳಲುತ್ತಿದ್ದ ಅವರು ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುದ್ಧಿಮಾಂದ್ಯತೆಯ ಸಮಸ್ಯೆಯೂ ಇತ್ತು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಇತ್ತೀಚೆಗೆ ಅವರು ಕೋಮಾ ಸ್ಥಿತಿಗೂ ತಲುಪಿದ್ದರು.

ಮಾಜಿ ಕೇಂದ್ರ ಸಚಿವ ಹಾಗೂ ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ರಾಯ್ ಅವರ ನಾಲ್ಕು ದಶಕಗಳ ರಾಜಕೀಯ ಪಯಣ ಕಾಂಗ್ರೆಸ್, ಟಿಎಂಸಿ ಮತ್ತು ಬಿಜೆಪಿ ಪಕ್ಷಗಳಲ್ಲಿ ವಿಸ್ತರಿಸಿತ್ತು. ಯುವ ಕಾಂಗ್ರೆಸ್‌ನಿಂದ ರಾಜಕೀಯ ಜೀವನ ಆರಂಭಿಸಿದ ಅವರು, 1998ರಲ್ಲಿ ಮಮತಾ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ ಸ್ಥಾಪಿಸಿದಾಗ ಸ್ಥಾಪಕ ಸದಸ್ಯರಾಗಿ ಕೈಜೋಡಿಸಿದರು. ಬಳಿಕ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, 2006ರಲ್ಲಿ ರಾಜ್ಯಸಭೆಗೆ ಆಯ್ಕೆಯಾದರು.

ಯುಪಿಎ-2 ಸರ್ಕಾರದಲ್ಲಿ ಮೊದಲು ಶಿಪ್ಪಿಂಗ್ ರಾಜ್ಯ ಸಚಿವರಾಗಿ, ನಂತರ 2012ರಲ್ಲಿ ರೈಲ್ವೆ ಸಚಿವರಾಗಿ ಕಾರ್ಯನಿರ್ವಹಿಸಿದರು. 2011ರಲ್ಲಿ ಎಡರಂಗದ 34 ವರ್ಷದ ಆಡಳಿತ ಅಂತ್ಯಗೊಳಿಸಿದ ಟಿಎಂಸಿಯ ಐತಿಹಾಸಿಕ ಗೆಲುವಿನಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಶಾರದಾ ಚಿಟ್‌ ಫಂಡ್ ಮತ್ತು ನಾರದ ಪ್ರಕರಣಗಳಲ್ಲಿ ಅವರ ಹೆಸರು ಕೇಳಿಬಂದಿದ್ದರೂ, ಸಂಘಟನೆ ನಿರ್ಮಾಣದಲ್ಲಿ ಅವರ ಪಾತ್ರ ಮಹತ್ವದ್ದಾಗಿತ್ತು.

RELATED ARTICLES
- Advertisment -
Google search engine

Most Popular