Monday, February 23, 2026
Google search engine

Homeರಾಜಕೀಯಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ : ಡಾ.ಜಿ.ಪರಮೇಶ್ವರ್

ಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ : ಡಾ.ಜಿ.ಪರಮೇಶ್ವರ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ. ಆ ಸಿದ್ಧಾಂತದ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಇದರಲ್ಲಿ ಹೊಸದೇನು ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಮೇಲೆ ಬದ್ಧರಾಗಿದ್ದಾರೆ. ಹಿಂದಿನಿಂದಲೂ ಕೂಡ ಸಾಮಾಜಿಕ ನ್ಯಾಯದ ಪರವಾಗಿದ್ದಾರೆ. ಅವರ ರಾಜಕೀಯದ ಅಡಿಪಾಯವೇ ಸಾಮಾಜಿಕ ನ್ಯಾಯ ಎಂದರು.

ಇದೇ ಸಂದರ್ಭದಲ್ಲಿ ರಂಜಾನ್ ಹಬ್ಬ ಹಾಗೂ ಹೋಳಿ ಹಬ್ಬ ಆಚರಣೆ ವೇಳೆ ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಕೊಡಬಾರದು. ಸಂತೋಷದಿಂದ ಹಬ್ಬ ಆಚರಿಸಬೇಕು. ಅದನ್ನು ಬಿಟ್ಟು ಬೇರೆ ರೀತಿಯಲ್ಲಿ ನಡೆಸಲು ಅವಕಾಶವಿಲ್ಲ. ಅದಕ್ಕೆ ಅವಕಾಶ ಕೊಡುವುದೂ ಇಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಬಳಿಕ ಮೊಬೈಲ್ ಬ್ಯಾನ್ ವಿಚಾರದ ಕುರಿತು ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆದಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಕೊಟ್ಟರೆ ವಿದ್ಯಾಭ್ಯಾಸದ ಮೇಲೆ ಬೇರೆ ರೀತಿಯ ಪರಿಣಾಮ ಬೀರುತ್ತಿದೆ. ಬಹಳಷ್ಟು ದೇಶಗಳಲ್ಲಿ ಅಧ್ಯಯನ ನಡೆಸಿ ಮೊಬೈಲ್ ಬ್ಯಾನ್ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಚಿಂತನೆ ಹರಿಸಿದ್ದು, ಇದರ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ತೀರ್ಮಾನ ಮಾಡುತ್ತಾರೆ ಎಂದರು.

ದಲಿತ ಸಿಎಂ ಕೂಗು ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದೆಲ್ಲ ವಿರೋಧ ಪಕ್ಷದವರು ಮಾಡುತ್ತಿರುವ ಕೆಲಸ. ವಿರೋಧ ಪಕ್ಷದವರು ತಮ್ಮ ವಿಚಾರಗಳನ್ನು ಮುಚ್ಚಿಟ್ಟುಕೊಳ್ಳಲು ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ.

ಮುಖ್ಯಮಂತ್ರಿಗಳು ಆಡಳಿತ ಮಾಡುತ್ತಿಲ್ಲವೇ? ಕಳೆದ ಹನ್ನೆರಡು ದಿನಗಳಿಂದ ಬಜೆಟ್ ಕುರಿತು ವಿವಿಧ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಕೂಗು ವಿಚಾರವನ್ನು ವಿರೋಧ ಪಕ್ಷದವರು ಸುಮ್ಮನೆ ಹೊರಗೆ ತರುತ್ತಿದ್ದಾರೆ ಎಂದರು. ಅಲ್ಲದೆ ದಲಿತ ಸಿಎಂ ಕಾಂಗ್ರೆಸ್ ಪಕ್ಷದವರೆ ಮಾಡಬೇಕಲ್ಲ.? ಇನ್ಯಾರು ಮಾಡುತ್ತಾರೆ. ಸಂದರ್ಭ ಬಂದಾಗ ಹೈಕಮಾಂಡ್ ಅವರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular