Friday, February 27, 2026
Google search engine

Homeರಾಜ್ಯಪಾಸ್‌ಪೋರ್ಟ್ ದಾಖಲೆ ಪರಿಶೀಲನೆಗೆ ಹೊಸ ರೂಲ್ಸ್‌

ಪಾಸ್‌ಪೋರ್ಟ್ ದಾಖಲೆ ಪರಿಶೀಲನೆಗೆ ಹೊಸ ರೂಲ್ಸ್‌

ಬೆಂಗಳೂರು : ಪಾಸ್‌ಪೋರ್ಟ್ ದಾಖಲೆ ಪರಿಶೀಲನೆ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ಜನಸ್ನೇಹಿಯಾಗಿಸಲು ಬೆಂಗಳೂರು ನಗರ ಪೊಲೀಸರಿಂದ ಹೊಸ ಮಾರ್ಗಸೂಚಿ ಜಾರಿಗೊಳಿಸಿದ್ದು, ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅನುಸರಿಸಬೇಕಾದ ಕಟ್ಟುನಿಟ್ಟಿನ ನಿಯಮಗಳನ್ನು ಡಿಜಿ ಹಾಗೂ ಐಜಿಪಿ ಸೂಚನೆಯಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರಕಟಿಸಿದ್ದಾರೆ.

ಹೊಸ ಮಾರ್ಗಸೂಚಿಯಂತೆ, ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಅಧಿಕಾರಿಗಳು ಬಾಡಿ-ವೋರ್ನ್ ಕ್ಯಾಮೆರಾ ಧರಿಸುವುದು ಕಡ್ಡಾಯವಾಗಿದೆ. ಪರಿಶೀಲನೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಸಾರ್ವಜನಿಕರ ವಿಶ್ವಾಸ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಪಾಸ್‌ಪೋರ್ಟ್ ಅರ್ಜಿದಾರರನ್ನು ಯಾವುದೇ ಕಾರಣಕ್ಕೂ ಪೊಲೀಸ್ ಠಾಣೆಗೆ ಕರೆಸಬಾರದು ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ.

ಬದಲಾಗಿ, ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಅರ್ಜಿದಾರರ ವಾಸಸ್ಥಳಕ್ಕೆ ಭೇಟಿ ನೀಡಿ, ಭೇಟಿ ಸಂದರ್ಭದಲ್ಲಿ ನೆರೆಹೊರೆಯವರಿಂದ ಅಗತ್ಯ ಮಾಹಿತಿ ಸಂಗ್ರಹಿಸುವುದೂ ಮಾರ್ಗಸೂಚಿಯ ಭಾಗವಾಗಿದೆ. ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ ಕನಿಷ್ಠ 24 ಗಂಟೆಗಳ ಮುನ್ನ SMS ಅಥವಾ ದೂರವಾಣಿ ಕರೆ ಮೂಲಕ ಮಾಹಿತಿ ನೀಡಬೇಕು. ಯಾವುದೇ ರೀತಿಯ ಆಮಿಷ ಅಥವಾ ಹಣದ ನಿರೀಕ್ಷೆ ಇಡಬಾರದು. ಈ ಉದ್ದೇಶಕ್ಕಾಗಿ ಅರ್ಜಿದಾರರಿಗೆ ಕಿರುಕುಳ ನೀಡುವುದು, ವಿನಾಕಾರಣ ಅಲೆದಾಡಿಸುವುದು ಅಥವಾ ವರದಿ ಸಲ್ಲಿಕೆಯಲ್ಲಿ ವಿಳಂಬ ಮಾಡುವುದು ಕಟ್ಟುನಿಟ್ಟಾಗಿ ನಿಷೇಧಿಸಿದ್ದು, ಪ್ರತಿಕೂಲ ವರದಿ ಸಲ್ಲಿಸುವ ಸಂದರ್ಭದಲ್ಲಿ ಅಧಿಕಾರಿಗಳು ಸೂಕ್ತ ಮತ್ತು ಸ್ಪಷ್ಟವಾದ ಪುರಾವೆಗಳನ್ನು ಹೊಂದಿರಬೇಕು ಎಂದು ಸೂಚಿಸಲಾಗಿದೆ.

ತರ್ಕಬದ್ಧ ಕಾರಣಗಳಿಲ್ಲದೆ ನಕಾರಾತ್ಮಕ ವರದಿ ಸಲ್ಲಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಈ ಎಲ್ಲಾ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಂಬಂಧಿತ ಡಿಸಿಪಿ ವಾರಕ್ಕೊಮ್ಮೆ ವರದಿ ಸಲ್ಲಿಸಬೇಕಾಗಿದೆ. ಮಾರ್ಗಸೂಚಿ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

RELATED ARTICLES
- Advertisment -
Google search engine

Most Popular