ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಸಾಲಿಗ್ರಾಮ ತಾಲೂಕಿನ ಸಾಲೇಕೊಪ್ಪಲು ಗ್ರಾಮದ ಎಸ್.ಪಿ.ಪಾರ್ಥ ಸಾರಥಿ ಅವರು ಜ್ಯೋತಿ ಬಾಪುಲೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಅರಮನೆ ಮೈಧಾನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಪಾರ್ಥಸಾರಥಿ ಅವರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಎಸ್.ಪಿ.ಪಾರ್ಥ ಸಾರಥಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಶಾಲೆಯ ಮಕ್ಕಳ ಮತ್ತು ಶಾಲೆಯ ಶೈಕ್ಷಣಿಕ ಪ್ರಗತಿಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ರಾಜ್ಯ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ, ಪ್ರಧಾನ ಕಾರ್ಯದರ್ಶಿ ಚೇತನ್ ಅವರು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಪಾರ್ಥ ಸಾರಥಿ ಪಿರಿಯಾ ಪಟ್ಟಣ ತಾಲೂಕಿನ ಮಾಕೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಇವರನ್ನು ಕೆ.ಆರ್.ನಗರ ಒಕ್ಕಲಿಗರ ನೌಕರರ ಸಂಘದ ಅಧ್ಯಕ್ಷ ಲಕ್ಕಿಕುಪ್ಪೆ ಶಂಕರೇಗೌಡ,ಪ್ರಧಾನ ಕಾರ್ಯದರ್ಶಿ ಹೆಬ್ಬಾಳ್ ಈಶ್ವರ್, ಮಾಜಿ ಪ್ರಧಾನ ಕಾರ್ಯದರ್ಶಿ ಚಿಕ್ಕನಾಯಕನಹಳ್ಳಿ ಸಿ.ಎಸ್.ಮಾರುತಿ, ಕೆ.ಆರ್.ನಗರ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಚಿಕ್ಕಕೊಪ್ಪಲು ಸಿ.ಎನ್.ಸ್ವಾಮಿ,ಪ್ರಧಾನ ಕಾರ್ಯದರ್ಶಿ ಸಂಗರಶೆಟ್ಟಹಳ್ಳಿ ಸುರೇಶ್ ಅವರು ಅಭಿನಂದಿಸಿದ್ದಾರೆ.



