ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸರ ವಶದಿಂದ ಪರಾರಿಯಾದ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟಗೊಂಡಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ ಕ್ರ 118/24 ಕಲಂ: 121(1), 132,262 BNS ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕ ರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಆರೋಪಿ ರಾಘವನ್ @ ಕೋಳಿಕರಣ್ ಎಂಬಾತನ ವಿರುದ್ದ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯು ಸುಳ್ಯದ ಎಸ್ ಸಿ ಜೆ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಬಿ ಮೋಹನ್ ಬಾಬು ರವರು ಆರೋಪಿಗೆ,
ಕಲಂ 121(1) ರಡಿಯಲ್ಲಿ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.10,000 ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ಕಲಂ 132 ರಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಮಾಡಿದ ಹಲ್ಲೆಗಾಗಿ 1 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ 10,000 ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ಕಲಂ262 ರಲ್ಲಿ ಕಾನೂನುಬದ್ಧವಾಗಿ ವಶಕ್ಕೆಪಡೆಯುವ ಸಂದರ್ಭದಲ್ಲಿ ತಡೆಯುಂಟು ಮಾಡಿದ್ದಕ್ಕಾಗಿ ೦1 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ. 10,000 ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಕುಮಾರಿ ಪ್ರೀತಿ ಎಂ.ಸಿ ರವರು ಸಮರ್ಥವಾಗಿ ವಾದ ಮಂಡಿಸಿದರು.



