Wednesday, March 4, 2026
Google search engine

Homeಸ್ಥಳೀಯಶಿಕ್ಷಣ ಕ್ಷೇತ್ರದ ಸೇವೆಗೆ ಎಚ್.ಸಿ. ಕುಮಾರ್‌ಗೆ ಜ್ಯೋತಿ ಬಾಪುಲೆ ಪ್ರಶಸ್ತಿ ಗೌರವ

ಶಿಕ್ಷಣ ಕ್ಷೇತ್ರದ ಸೇವೆಗೆ ಎಚ್.ಸಿ. ಕುಮಾರ್‌ಗೆ ಜ್ಯೋತಿ ಬಾಪುಲೆ ಪ್ರಶಸ್ತಿ ಗೌರವ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ‌.ಆರ್.ನಗರ : ಸಾಲಿಗ್ರಾಮ ತಾಲೂಕಿನ ಹಳಿಯೂರು ಗ್ರಾಮದ ಚಲುವೇಗೌಡ ರವರ ಮಗ ಎಚ್‌.ಸಿ.ಕುಮಾರ್ ಅವರು ಜ್ಯೋತಿ ಬಾಪುಲೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹುಣಸೂರು ತಾಲೂಕಿನ ಕಿರಿಜಾಜಿ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಚ್.ಸಿ.ಕುಮಾರ್ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಾ ಇದ್ದಾರೆ.

ಸುಮಾರು 26 ವರ್ಷಗಳಿಂದ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಕುಮಾರ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಶಾಲೆಯ ಮಕ್ಕಳ ಮತ್ತು ಶಾಲೆಯ ಶೈಕ್ಷಣಿಕ ಪ್ರಗತಿಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ರಾಜ್ಯ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ, ಪ್ರಧಾನ ಕಾರ್ಯದರ್ಶಿ ಚೇತನ್ ಅವರು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಬೆಂಗಳೂರಿನ ಅರಮನೆ ಮೈಧಾನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಕುಮಾರ್ ಅವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಲಾಯಿತು ಇವರನ್ನು ಹುಣಸೂರು ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಚನ್ನ ವೀರಪ್ಪ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ , ಮೈಸೂರು ಜಿಲ್ಲಾ ಸರ್ಕಾರಿ ಎನ್.ಪಿ.ಎಸ್.ನೌಕರರ ಸಂಘದ ಅಧ್ಯಕ್ಷ ಸಾಲೇಕೊಪ್ಪಲು ಎಸ್.ಆರ್.
ಮಂಜುನಾಥ್ ಅಭಿನಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular