Thursday, March 5, 2026
Google search engine

Homeರಾಜಕೀಯಗ್ಯಾರಂಟಿಯಿಂದ ಆರ್ಥಿಕ ಹೊರೆಯಾಗಿದೆ ಆದರೂ ಅಭಿವೃದ್ಧಿ ಕೆಲಸಗಳು ನಿಂತಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಗ್ಯಾರಂಟಿಯಿಂದ ಆರ್ಥಿಕ ಹೊರೆಯಾಗಿದೆ ಆದರೂ ಅಭಿವೃದ್ಧಿ ಕೆಲಸಗಳು ನಿಂತಿಲ್ಲ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕೂಡ ಅದೇ ಧಾಟಿಯಲ್ಲಿ ಮಾತನಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 50-60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿರುವುದು ಸರ್ಕಾರದ ಮೇಲೆ ಆರ್ಥಿಕ ಹೊರೆಯಾಗಿದೆ. ಆದರೂ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದಿದ್ದಾರೆ.

ಇನ್ನೂ ಕಳೆದ 2-3 ವರ್ಷಗಳಲ್ಲಿ ಸರ್ಕಾರ ಏನೂ ಮಾಡಿಲ್ಲ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪ ನಿರಾಧಾರ. ನಾವು ಕೆಲಸ ಮಾಡಿದ್ದೇವೋ ಇಲ್ಲವೋ ಎಂಬುದನ್ನು ಜನರೇ ತೀರ್ಮಾನಿಸುತ್ತಾರೆ. ಗುತ್ತಿಗೆದಾರರ ಬಾಕಿ ಬಿಲ್ ಕುರಿತ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದರೆ ಸಮಸ್ಯೆ ಬಗೆಹರಿದು ಹಣ ಬಿಡುಗಡೆಯಾಗಲಿದೆ ಎಂದರು.

‌ಈ ವೇಳೆ ರಾಜ್ಯ ರಾಜಕಾರಣದ ಬಗ್ಗೆ ಮಾತನಾಡಿದ ಅವರು ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ಕುರಿತ ಗೊಂದಲಗಳಿಗೆ ಹೈಕಮಾಂಡ್ ಕೂಡಲೇ ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಒಬ್ಬರು ಅರ್ಧ ಅವಧಿ ಎನ್ನುತ್ತಾರೆ, ಮತ್ತೊಬ್ಬರು ಪೂರ್ಣ ಅವಧಿ ಎನ್ನುತ್ತಾರೆ. ಇಂತಹ ಚರ್ಚೆಗಳಿಂದ ಶಾಸಕರು, ಕಾರ್ಯಕರ್ತರು ಹಾಗೂ ಅಧಿಕಾರಿಗಳಲ್ಲಿ ಅನಿಶ್ಚಿತತೆ ಸೃಷ್ಟಿಯಾಗುತ್ತಿದೆ. ಗೊಂದಲ ಹೀಗೆಯೇ ಮುಂದುವರಿದರೆ ಸರ್ಕಾರಕ್ಕೆ ಸಂಕಷ್ಟವಾಗಲಿದೆ. ದೆಹಲಿ ನಾಯಕತ್ವವೇ ಈ ಬಗ್ಗೆ ಕಟ್ಟುನಿಟ್ಟಿನ ನಿರ್ಧಾರ ಪ್ರಕಟಿಸಬೇಕು. ಬಜೆಟ್‌ಗೂ ಮುನ್ನ ಅಥವಾ ಆಮೇಲೆ ಸಿಎಂ ಬದಲಾವಣೆ ಇದೆಯೋ ಇಲ್ಲವೋ ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದರು.

ಮೂಲಸೌಕರ್ಯ ವಲಯದಲ್ಲಿ ಪದೇ ಪದೇ ಹೊರಹೊಮ್ಮುತ್ತಿರುವ ಗುತ್ತಿಗೆದಾರರಿಗೆ ಬಾಕಿ ಪಾವತಿಗಳ ವಿಷಯದ ಕುರಿತು, ಮುಖ್ಯಮಂತ್ರಿಗಳ ಗಮನಕ್ಕೆ ತಂದರೆ ಈ ವಿಷಯವನ್ನು ಪರಿಹರಿಸಬಹುದು ಎಂದರಲ್ಲದೆ, ಬಾಕಿ ಇರುವ ಮಸೂದೆಗಳ ವಿಷಯವನ್ನು ಮುಖ್ಯಮಂತ್ರಿ ಮುಂದೆ ಇಟ್ಟ ನಂತರ, ಸಮಸ್ಯೆಯನ್ನು ಪರಿಹರಿಸಲಾಗುವುದು ಮತ್ತು ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular