Saturday, March 7, 2026
Google search engine

Homeರಾಜಕೀಯರಾಹುಕಾಲದ ಚರ್ಚೆ ನಡುವೆ 10.15ಕ್ಕೆ ಬಜೆಟ್‌ ಮಂಡನೆ : ಸುರೇಶ್‌ ಕುಮಾರ್‌ ವ್ಯಂಗ್ಯ

ರಾಹುಕಾಲದ ಚರ್ಚೆ ನಡುವೆ 10.15ಕ್ಕೆ ಬಜೆಟ್‌ ಮಂಡನೆ : ಸುರೇಶ್‌ ಕುಮಾರ್‌ ವ್ಯಂಗ್ಯ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ವಿಧಾನಸಭೆಯಲ್ಲಿ ಈ ವರ್ಷದ ಬಜೆಟ್‌ ಅನ್ನು ಮಂಡಿಸುತ್ತಿದ್ದಾರೆ.

ಸಾಮಾನ್ಯವಾಗಿ ಪ್ರತಿಭಾರಿ 11ರ ನಂತರ ಬಜೆಟ್‌ ಆರಂಭವಾಗುತ್ತಿತ್ತು, ಆದರೆ ಇಂದು ಶುಕ್ರವಾರ, ಬೆಳಗ್ಗೆ 10. 30 ಗಂಟೆಯಿಂದ ರಾಹುಕಾಲ! ಬೆಳಗ್ಗೆ 7.30 ಗಂಟೆ ಯಿಂದ 9 ಗಂಟೆಯವರೆಗೂ ಗುಳಿಕಾಲ. ಮೂಢನಂಬಿಕೆ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಸುರೇಶ್‌ ಕುಮಾರ್‌ ಪೋಸ್ಟ್‌ ಮಾಡಿದ್ದಾರೆ.

ರಾಹುಕಾಲ ಆರಂಭಕ್ಕೂ ಮೊದಲು ಬಜೆಟ್‌ ಮಂಡನೆ ಆರಂಭಿಸಬೇಕೆಂಬ ಕಾರಣಕ್ಕೆ 10.15 ಗಂಟೆಯನ್ನು ಆಯ್ಕೆ ಮಾಡಿರಬಹುದೇ ಎಂಬ ಅನುಮಾನವನ್ನು ಸುರೇಶ್‌ ಕುಮಾರ್‌ ವ್ಯಕ್ತಪಡಿಸಿದ್ದಾರೆ.

ಸುರೇಶ್‌ ಕುಮಾರ್‌ ಅವರ ಈ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಕೆಲವರು ಇದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದರೆ, ಮತ್ತೊಬ್ಬರು ಇದರಲ್ಲಿ ರಾಜಕೀಯ ಟೀಕೆ ಅಡಗಿದೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular