ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸಿಡಿದು ಭಾರೀ ಸ್ಫೋಟಗೊಂಡ ಘಟನೆ ವಿಟ್ಲ ಸಮೀಪದ ಕಂಬಳಬೆಟ್ಟು ನೂಜಿ ಎಂಬಲ್ಲಿ ನಡೆದಿದೆ.
ಸರಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಆರೋಪಿತ ನಿವಾಸಿ ಅಬ್ದುಲ್ ಗಫೂರ್ ಎಂಬಾತನು ಅಕ್ರಮವಾಗಿ ಶೆಡ್ ನಿರ್ಮಿಸಿ, ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯತನದಿಂದ ಮತ್ತು ಬೇಜಾವಬ್ದಾರಿಯಿಂದ ಅಕ್ರಮವಾಗಿ ದಾಸ್ತಾನಿರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಸುಡುಮದ್ದುಗಳು ಸ್ಪೋಟಗೊಂಡಿದೆ. ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಮರಗಳು ಸುಟ್ಟು ಹೋಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿರುವುದಿಲ್ಲ ಎಂಬುದಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ:58/26, ಕಲಂ:9B Thd explosives act 1884 act & 288 BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತ ಅಬ್ದುಲ್ ಗಫೂರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.



