ಲಕ್ನೋ: ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 13 ವರ್ಷದ ವಿಶೇಷಚೇತನ ಬಾಲಕಿ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಹಜರತ್ಗಂಜ್ ಪ್ರದೇಶದಲ್ಲಿ 13 ವರ್ಷದ ವಿಶೇಷಚೇತನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಬಾಲಕಿಯನ್ನು ಆಕೆಯ ಮನೆಯಿಂದ ಅಪಹರಿಸಿದ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ . ಸದ್ಯ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.