ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಮೈಸೂರು ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ.ಸೋಮಶೇಖರ್ ನಾಮಪತ್ರ ಸಲ್ಲಿಸಿದರು.
ಮೈಸೂರು ಸಹಕಾರ ಯುನಿಯನ್ ಕಚೇರಿಯಲ್ಲಿ ಹುಣಸೂರು ಶಾಸಕ ಜಿ.ಡಿ.ಹರೀಶ್ ಗೌಡ ಅವರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳಿಗೆ ತಮ್ಮ ನಾಮ ಪತ್ರ ಸಲ್ಲಿಸಿದರು. ಹಾಲಿ ಅಂಕನಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿರುವ ಎ.ಟಿ.ಸೋಮಶೇಖರ್ ಅವರು ಮಾಜಿ ಸಚಿವ ಸಾ.ರಾ.ಮಹೇಶ್ ಮತ್ತು ಶಾಸಕ ಜಿ.ಡಿ.ಹರೀಶ್ ಗೌಡರ ಸೂಚನೆಯಂತೆ ಈ ಚುನಾವಣಾ ಕಣಕ್ಕೆ ಇಳಿದಿದ್ದಾರೆ.
ಈ ಸಂದರ್ಭದಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಕುಪ್ಪಳ್ಳಿ ಸೋಮು, ಜಿಲ್ಲಾ ಡೈರಿ ನಿರ್ದೇಶಕ ಕುಮಾರ್, ಅಂಕನಹಳ್ಳಿ ಸತೀ ಸೇರಿದಂತೆ ಹಾಜರಿದ್ದರು.