Friday, May 23, 2025
Google search engine

Homeರಾಜ್ಯಚಿಕ್ಕಮಗಳೂರಿನ ರಾಣಿಝರಿಗೆ ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ

ಚಿಕ್ಕಮಗಳೂರಿನ ರಾಣಿಝರಿಗೆ ಟ್ರಕ್ಕಿಂಗ್ ಬಂದಿದ್ದ ಯುವಕ ನಾಪತ್ತೆ

ಚಿಕ್ಕಮಗಳೂರು: ಬೆಂಗಳೂರಿನಿಂದ ಟ್ರಕ್ಕಿಂಗ್ ಬಂದಿದ್ದ ಯುವಕನೊಬ್ಬ ರಾಣಿಝರಿ ಪಾಯಿಂಟ್ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ.

ನಾಪತ್ತೆಯಾದ ಯುವಕನನ್ನು ಭರತ್‌ ಎಂದು ಗುರುತಿಸಲಾಗಿದೆ. ಗುಡ್ಡದ ತುದಿಯಲ್ಲಿ ಯುವಕನ ಟೀ ಶರ್ಟ್, ಮೊಬೈಲ್, ಸ್ಲಿಪರ್ ಪತ್ತೆಯಾಗಿದೆ.

ಭರತ್‌ಬಿ.ಇ ಮುಗಿಸಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ಕಂಪನಿ ಭರತ್​ ಗೆ 3 ತಿಂಗಳ ಸಂಬಳ ನೀಡಿ ಕೆಲಸದಿಂದ ತೆಗೆದು ಹಾಕಿತ್ತು. ಇದರಿಂದ ನೊಂದಿದ್ದ ಭರತ್‌ ತನ್ನ‌ ಬೈಕ್‌ ನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿ ರಾಣಿಝರಿ ಪಾಯಿಂಟ್ ಬಂದಿದ್ದರು. ಮಗ ವಾಪಸ್ ಮನೆಗೆ ಬಾರದ ಕಾರಣ ಪೋಷಕರು, ಮಗನನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ಬಂದಿದ್ದಾರೆ.

ಸದ್ಯ ಯುವಕನಿಗಾಗಿ ಬಾಳೂರು ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular