ಬಂಟ್ವಾಳ : ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಅಬ್ದುಲ್ ರಹೀಮಾನ್ ಕೊಲೆ ಕೇಸ್ ನಲ್ಲಿ ಪೊಲೀಸರು 13 ಮಂದಿಯನ್ನು ಅಂದರ್ ಮಾಡಿದ್ದಾರೆ.
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟಿತ ಅಪರಾಧ ತಡೆ ಕಾಯ್ದೆಯಡಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ದೀಪಕ್, ಚಿಂತನ್, ಪ್ರಥ್ವಿರಾಜ್ ಜೋಗಿ, ಸುಮಿತ್ ಬಿ.ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್, ಶಿವಪ್ರಸಾದ್ ತುಂಬೆ, ಪ್ರದೀಪ ಶಾಹಿತ್ @ ಸಾಹಿತ್, ಸಚಿನ್ @ ಸಚ್ಚು ರೊಟ್ಟಿಗುಡ್ಡೆ, ರಂಜಿತ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ
ಅರೋಪಿಗಳನ್ನು ಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹಿಂದೂಪರ ಸಂಘಟನೆ ಮುಖಂಡ ಭರತ್ ಕುಮ್ಡೇಲು ವಿರುದ್ಧವೂ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಂಧನ ಭೀತಿ ಹಿನ್ನೆಲೆ ಭರತ್ ಎಸ್ಕೇಪ್ ಆಗಿದ್ದಾನೆ.
ಭರತ್ ಹಲವು ವರ್ಷಗಳಿಂದ ಕೊಲೆ, ಪ್ರಚೋದನಕಾರಿ ಭಾಷಣಗಳು, ಕಾನೂನುಬಾಹಿರ ಚಟುವಟಿಕೆ, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.