ಮಂಡ್ಯ: ತರಗತಿ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರ ಮುಷ್ಕರ ಹಿನ್ನಲೆ ಉಪನ್ಯಾಸಕರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿದೆ.
ಮಂಡ್ಯದ ಡಿಸಿ ಕಚೇರಿ ಬಳಿ ಜಮಾವಣೆಗೊಂಡ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗೆ ಹಿನ್ನಡೆ ಆಗುತ್ತಿದೆ. ಕೆಲವೊಂದು ವಿಶ್ವ ವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುವ ವೇಳಾಪಟ್ಟಿ ಬಿಡುಗಡೆ ಮಾಡಿದೆ . ಆದರೆ ತರಗತಿಗಳು ಸರಿಯಾಗಿ ನಡೆಯದೆ ವಿದ್ಯಾರ್ಥಿಗಳು ಪರೀಕ್ಷೆ ಹೇಗೆ ಬರೆಯಲು ಸಾಧ್ಯ. ಆದ್ದರಿಂದ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.
ಉಪನ್ಯಾಸಕರ ಗೌರವಯುತ ಜೀವನವನ್ನು ಸಾಧ್ಯವಾಗಿಸುವುದು ಸರ್ಕಾರದ ಕರ್ತವ್ಯವಾಗಿದೆ. ರಾಜ್ಯದ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಯನ್ನು ಭರ್ತಿ ಮಾಡಿ. ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಒತ್ತಾಯಿಸಿದರು.