Tuesday, February 17, 2026
Google search engine

Homeಅಪರಾಧಟಾಟಾ ಏಸ್, ಬೈಕ್ ನಡುವೆ ಅಪಘಾತ: ಬೈಕ್ ಸವಾರ

ಟಾಟಾ ಏಸ್, ಬೈಕ್ ನಡುವೆ ಅಪಘಾತ: ಬೈಕ್ ಸವಾರ

ಭರಮಸಾಗರ: ಸಮೀಪದ ಹೊಸ ರಂಗಾಪುರದ ಬಳಿ ಟಾಟಾ ಏಸ್ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು

ಹಿಂಬದಿ ಸವಾರ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ.

ಹೊಸ ರಂಗಾಪುರ ಗ್ರಾಮದ ಅಂಜಿನಪ್ಪ (45) ಮೃತ ವ್ಯಕ್ತಿ. ನನೀನ್ (22) ತೀವ್ರ ಗಾಯಗೊಂಡ ಬೈಕ್ ಹಿಂಬದಿ ಸವಾರ.

ಟಾಟಾ ಏಸ್ ವಾಹನ ಬಾವಿಹಾಳ್, ಅಳಗವಾಡಿ ಮಾರ್ಗವಾಗಿ ಹೊಸ ರಂಗಾಪುರದ ಬಳಿ ಬರುವಾಗ ಸಿರಿಗೆರೆ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ಸವಾರ ಮೃತ ಪಟ್ಟಿದ್ದಾನೆ. ಘಟನೆಯಲ್ಲಿ ಬೈಕ್ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಇಬ್ಬರು ಕೆಲ ದೂರ ಎಸೆಯಲ್ಪಟ್ಟಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದರು.

ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular