Saturday, March 7, 2026
Google search engine

Homeಅಪರಾಧ8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ‌ಬಂಧಿಸಲಾಗಿದೆ. ಆಂಧ್ರಪ್ರದೇಶದ ಲಕ್ಕು ಕೊಂಡಾ ರೆಡ್ಡಿ, ಬಂಧಿತ ಆರೋಪಿ.
ಮಂಗಳೂರು ಉತ್ತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 32/2015 ಕಲಂ 415, 417, 418, 419, 420, 421, 422, 406, 409, 120 (23) 3 149 ಅಡಿಯಲ್ಲಿ ‌ಪ್ರಕರಣ ದಾಖಲಾಗಿತ್ತು.
Maithri Plantation and Horticulture Pvt Ltd ಎಂಬ ಸಂಸ್ಥೆಯ ಅಡಿಯಲ್ಲಿ ಹೆಚ್ಚಿನ ಬಡ್ಡಿ ನೀಡುವುದಾಗಿ ಸಾರ್ವಜನಿಕರಿಂದ ಹಣವನ್ನು ಡೆಪಾಸಿಟ್ ಮಾಡಿಸಿ ಸಾರ್ವಜನಿಕರಿಗೆ ಮೋಸ, ವಂಚನೆ ಮಾಡಿರುವ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಅದರಂತೆ ಆರೋಪಿ
ಲಕ್ಕು ಕೊಂಡಾ ರೆಡ್ಡಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ ಹಾಗೂ ಪೊಲೀಸರಿಗೆ ಸಿಗದೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದರಿಂದ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿತನನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪಿಎಸ್‌ಐ ನೇತೃತ್ವದ ತಂಡ ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ಎಂಬಲ್ಲಿ ಪತ್ತೆ ಮಾಡಿ ದಸ್ತಗಿರಿ ಮಾಡಿ ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಆರೋಪಿತನ ವಿರುದ್ಧ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ವಿವಿಧ ಕೇಸ್ ಗಳು ದಾಖಲಾಗಿದೆ.

RELATED ARTICLES
- Advertisment -
Google search engine

Most Popular