17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿತನನ್ನು ಬಂಧಿಸಲಾಗಿದೆ. ರಿಯಾಜ್, ಬಂಧಿತ ವ್ಯಕ್ತಿ. ಬರ್ಕೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 15/2009 ಕಲಂ 52(a),63 ಕಾಪಿರೈಟ್ ಕಾಯ್ದೆ ಪ್ರಕರಣದಲ್ಲಿ ಆರೋಪಿತನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಹೀಗಾಗಿ ನ್ಯಾಯಾಲಯವು 2016 ರಲ್ಲಿ ಸದ್ರಿ ಪ್ರಕರಣವನ್ನು ಎಲ್ ಪಿ ಸಿ 79/2016 ಪ್ರಕರಣವಾಗಿ ಪರಿವರ್ತಿಸಿತ್ತು. ಈ ಪ್ರಕರಣದಲ್ಲಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿತನಾದ ಆರೋಪಿ ರಿಯಾಜ್ ಎಂಬಾತನನ್ನು ಬರ್ಕೆ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
RELATED ARTICLES



