Monday, November 3, 2025
Google search engine

Homeರಾಜ್ಯಕಾಗಿನೆಲೆ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆಗೆ ಮಂಜೂರಾತಿ - ಸಿಎಂ

ಕಾಗಿನೆಲೆ ಅಭಿವೃದ್ಧಿಗಾಗಿ ಕ್ರಿಯಾ ಯೋಜನೆಗೆ ಮಂಜೂರಾತಿ – ಸಿಎಂ

ಹಾವೇರಿ : ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಬುಧವಾರ) ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.

ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ 34 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.

ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದರು.

ಪ್ರಾಧಿಕಾರದ ವ್ಯಾಪ್ತಿಯ ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಖಾಲಿಯಿರುವ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಯಿತು. ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಲು ಚರ್ಚಿಸಲಾಯಿತು ಎಂದು ತಿಳಿಸಿದರು.

ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಸಚಿವರಾದ ಶಿವಾನಂದ ಪಾಟೀಲ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular