Friday, April 24, 2026
Google search engine

Homeಸ್ಥಳೀಯಇಂದು ನಗರದಲ್ಲಿ ವರನಟ ಡಾ. ರಾಜ್‍ಕುಮಾರ್ ಜನ್ಮದಿನಾಚರಣೆ : ಡಾ. ರಾಜ್ ಚಲನಚಿತ್ರ ಗೀತೆಗಳ ಗಾಯನ,ವಿಶೇಷ...

ಇಂದು ನಗರದಲ್ಲಿ ವರನಟ ಡಾ. ರಾಜ್‍ಕುಮಾರ್ ಜನ್ಮದಿನಾಚರಣೆ : ಡಾ. ರಾಜ್ ಚಲನಚಿತ್ರ ಗೀತೆಗಳ ಗಾಯನ,ವಿಶೇಷ ಉಪನ್ಯಾಸ

ಚಾಮರಾಜನಗರ :  ಕನ್ನಡದ ಮೇರುನಟ, ವರನಟ, ಪದ್ಮಭೂಷಣ ಡಾ. ರಾಜ್‍ಕುಮಾರ್ ಅವರ 97ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 24ರಂದು ಬೆಳಗ್ಗೆ 10.30 ಕ್ಕೆ  ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿದೆ.

  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

  ಕಾರ್ಯಕ್ರಮವನ್ನು ಸ್ಮರಣೀಯವನ್ನಾಗಿಸುವ ಉದ್ದೇಶದಿಂದ ಡಾ. ರಾಜ್‍ಕುಮಾರ್ ಚಲನಚಿತ್ರಗೀತೆಗಳ ಗಾಯನವನ್ನು ಜಿಲ್ಲೆಯ ಹೆಸರಾಂತ ಕಲಾವಿದರು ನಡೆಸಿಕೊಡಲಿದ್ದಾರೆ. ಚಲನಚಿತ್ರ ನಿರ್ದೇಶಕರು ಹಾಗೂ ಕರ್ನಾಟಕ ಸಾಹಿತ್ಯ ಅಕಾಡಮಿ ಸದಸ್ಯರಾದ ಪ್ರಕಾಶ್ ರಾಜ್ ಮೇಹು ಅವರು ‘ಡಾ. ರಾಜ್‍ಕುಮಾರ್ ಕನ್ನಡದ ಅಸ್ಮಿತೆ’ ವಿಷಯ ಕುರಿತು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಘನ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

RELATED ARTICLES
- Advertisment -
Google search engine

Most Popular