ಬೆಂಗಳೂರು: ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಚಿನ್ನದ ಅಕ್ರಮ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿ ಇದೀಗ 1 ವರ್ಷದ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ. ಕಾಫಿ ಪೋಸಾ ಅಡ್ವೈಸರಿ ಬೋರ್ಡ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಆರೋಪಿಗಳಿಗೆ ಜಾಮೀನು ಕೋರುವ ಅವಕಾಶವಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದೆ. ರನ್ಯಾ ರಾವ್ ಸೇರಿದಂತೆ ಮೂವರು ಆರೋಪಿಗಳಿಗೆ ಈ ಶಿಕ್ಷೆ ವಿಧಿಸಲಾಗಿದೆ.
ಡಿ.ಆರ್.ಐ ಈ ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ರವಾನಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.8 ಕೆಜಿ ಚಿನ್ನದೊಂದಿಗೆ ರನ್ಯಾ ರಾವ್ ಬಂಧಿತರಾಗಿದ್ದರು. ಇದು ಕರ್ನಾಟಕದಲ್ಲಿ ದಾಖಲಾಗಿರುವ ಅತಿದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣವೆಂದು ತಿಳಿದುಬಂದಿದೆ. ರನ್ಯಾ, ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.