Monday, May 11, 2026
Google search engine

Homeಸಿನಿಮಾವಿಜಯ್ ಸಿಎಂ ಆದ ಬೆನ್ನಲ್ಲೇ ನಟಿ ತ್ರಿಷಾ ಪೋಸ್ಟ್‌ ವೈರಲ್‌

ವಿಜಯ್ ಸಿಎಂ ಆದ ಬೆನ್ನಲ್ಲೇ ನಟಿ ತ್ರಿಷಾ ಪೋಸ್ಟ್‌ ವೈರಲ್‌

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಟಿವಿಕೆ ಮುಖ್ಯಸ್ಥ ವಿಜಯ್ ಅಧಿಕಾರ ಸ್ವೀಕರಿಸಿದ್ದಾರೆ. ಅದರ ಬೆನ್ನಲೇ ಅವರ ಆಪ್ತ ಸ್ನೇಹಿತೆಯಾಗಿರುವ ನಟಿ ತ್ರಿಶಾ ಕೃಷ್ಣನ್ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಒಂದನ್ನ ಹಂಚಿಕೊಂಡಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ.

ನಟಿ ತ್ರಿಷಾ ತಮ್ಮ ಪೋಸ್ಟ್‌ನಲ್ಲಿ ಕೆಲವು ಫೊಟೋಗಳನ್ನ ಹಾಕಿ ಅದಕ್ಕೆ The Love Is Always Louder ಎಂಬ ಕ್ಯಾಪ್ಷನ್‌ ಕೊಟ್ಟಿದ್ದಾರೆ. ವಿಜಯ್ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಧರಿಸಿದ್ದ ಸೀರೆಯಲ್ಲಿ ಫೋಟೋಗಳನ್ನು ಶೇರ್ ಮಾಡಿ, The Love Is Always Louder ಈ ರೀತಿಯಾಗಿ ಬರೆದುಕೊಂಡಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಿಂಚಿದ್ದ ತ್ರಿಶಾ ಸಂಭ್ರಮ, ಸಡಗರ ಭಾರೀ ಕುತೂಹಲ ಕ್ರಿಯೇಟ್ ಮಾಡಿತ್ತು. ಇದೀಗ ಹಾಕಿದ ಪೋಸ್ಟ್ ಮತ್ತೆ ಹಲವು ಅರ್ಥಗಳನ್ನು ಹುಟ್ಟುಹಾಕಿದೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ತ್ರಿಷಾ ಅವರು ತಾಯಿ ಉಮಾ ಕೃಷ್ಣನ್ ಅವರೊಂದಿಗೆ ಆಗಮಿಸಿದ್ದರು. ನೀಲಿ ಬಣ್ಣದ ರೇಷ್ಮೆ ಸೀರೆ ಧರಿಸಿ, ಮಲ್ಲಿಗೆ ಮುಡಿದು ಸಾಂಪ್ರದಾಯಿಕ ಉಡುಪಿನಲ್ಲಿ ಕಂಗೊಳಿಸಿದ್ದರು.

ವಿಜಯ್‌ಗೆ ಶುಭಕೋರಿದ್ದ ತ್ರಿಶಾ, ಈ ಕ್ಷಣ ತುಂಬಾ ಹೆಮ್ಮೆ ಎನಿಸುತ್ತಿದೆ. ವಿಜಯ್ ಅವರಿಗೆ ಬೆಂಬಲಿಸಿದ ತಮಿಳುನಾಡಿನ ಜನತೆಗೂ ಅಭಿನಂದನೆ ಸಲ್ಲಿಸುತ್ತೇನೆʼ ಎಂದಿದ್ದರು.

RELATED ARTICLES
- Advertisment -
Google search engine

Most Popular