- ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ–2026
ಬಳ್ಳಾರಿ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಸದಸ್ಯರ ಪದಾವಧಿಯು 2026ನೇ ನ.11 ಕ್ಕೆ ಮುಕ್ತಾಯಗೊಳ್ಳಲಿದ್ದು, ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ–2026 ರ ಚುನಾವಣೆಗೆ ಸಂಬAಧಿಸಿದAತೆ ದೂರು ಸ್ವೀಕರಿಸಲು ಹಾಗೂ ಮತದಾರರಿಗೆ ಮಾಹಿತಿ ನೀಡಲು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಕೋಣೆ ಸಂಖ್ಯೆ 17 ರಲ್ಲಿ ದೂರು ಮೇಲ್ವಿಚಾರಣೆ ತಂಡ ಹಾಗೂ ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರ (ಕಂಪ್ಲೆöÊAಟ್ಸ್ ಮಾನಿಟರಿಂಗ್ ಸೆಲ್ ಮತ್ತು ವೋರ‍್ಸ್ ಹೆಲ್ಪ್ಡೆಸ್ಕ್) ಸ್ಥಾಪಿಸಿಲಾಗಿದೆ.
ಈ ಸಲಹಾ ಕೇಂದ್ರದ ದೂ.08472-200255 ಆಗಿದ್ದು, ಸಾರ್ವಜನಿಕರು ಈ ಸಲಹಾ ಕೇಂದ್ರ ತಂಡಕ್ಕೆ ಸಂಪರ್ಕಿಸಿ ಮತದಾರರ ನೋಂದಣಿ ಮತ್ತು ಚುನಾವಣೆಗೆ ಕುರಿತಾದ ಮಾಹಿತಿ ಪಡೆಯಬಹುದಾಗಿದೆ. ಯಾವುದೇ ದೂರುಗಳಿದ್ದಲ್ಲಿ ದಾಖಲಿಸಬಹುದಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ ಅವರು ತಿಳಿಸಿದ್ದಾರೆ.
ಅರ್ಹತಾ ದಿನಾಂಕ 01.11.2025ಕ್ಕೆ ಅನ್ವಯಸುವಂತೆ ಮತದಾರರ ಪಟ್ಟಿ ಸಿದ್ಧಪಡಿಸಲು ವೇಳಾಪಟ್ಟಿ ಹೊರಡಿಸಲಾಗಿದ್ದು, ದಿನಾಂಕ:25.11.2025 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿ ದಿನಾಂಕ:25.11.2025 ರಿಂದ 10.12.2025ರ ವರೆಗೆ ಆಕ್ಷೇಪಣೆಗಳನ್ನು ಅಹ್ವಾನಿಸಿ ದಿನಾಂಕ:30.12.2025 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ದಪಡಿಸಬೇಕಾಗಿರುವುದರಿಂದ ಈ ಕಾರ್ಯಕ್ಕಾಗಿ ಅರ್ಹ ಮತದಾರರು ನೋಂದಣಿಗಾಗಿ ಸೂಕ್ತ ಮಾಹಿತಿಯನ್ನು ನೀಡಿ, ಅವರ ಹೆಸರನ್ನು ನೋಂದಾಯಿಸಲು ಅಲ್ಲದೇ ಈಗಾಗಲೇ ನೋಂದಣಿಯಾಗಿದ್ದಲ್ಲಿ ಅವರ ಮತದಾರರ ಪಟ್ಟಿಯ ಭಾಗ ಸಂಖ್ಯೆ ಹಾಗೂ ಕ್ರಮ ಸಂಖ್ಯೆಯ ಮಾಹಿತಿ ನೀಡುವುದು ಇದನ್ನು ಹೊರತುಪಡಿಸಿಯು ಸಹ ಮತದಾರರ ನೋಂದಣಿ ಪ್ರಕ್ರೀಯೆ ಪ್ರಾರಂಭದಿAದ ಈ ಚುನಾವಣೆಯ ಫಲಿತಾಂಶ ಘೋಷಣೆಯಾಗುವವರೆಗೂ ಲಿಖಿತವಾಗಿ, ಮೌಖಿಕವಾಗಿ ಹಾಗೂ ದೂರವಾಣಿ ಮುಖಾಂತರ ಸ್ವೀಕೃತವಾಗುವಂತಹ ದೂರುಗಳ ಮೇಲೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ಕ್ರಮಕೈಗೊಳ್ಳಲು ದೂರು ಮೇಲ್ವಿಚಾರಣೆ ತಂಡ ಹಾಗೂ ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರವನ್ನು ಸ್ಥಾಪಿಸಿ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಿಸಲಾಗಿದೆ.
*ಅಧಿಕಾರಿ ಹಾಗೂ ಸಿಬ್ಬಂದಿಯ ಪದನಾಮ, ಮೊಬೈಲ್ ಸಂಖ್ಯೆ:*
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಬಜೇಟ್ ಆಫೀಸರ್ ಪ್ರಸನ್ನಕುಮಾರ(ಮೊ.9448712912), ಶಿರಸ್ತೇದಾರ ಅಶೋಕ(ಮೊ.9731720711), ಶಿರಸ್ತೇದಾರ ರವಿಕುಮಾರ ಗಾಜರೆ(ಮೊ.9480149223) ಹಾಗೂ ದ್ವಿತೀಯ ದರ್ಜೆ ಸಹಾಯಕ ಶರಣಪ್ಪ ಶ್ರೀಗಿರಿ(ಮೊ.7406111177) ಮತ್ತು ದ್ವಿತೀಯ ದರ್ಜೆ ಸಹಾಯಕ ಪ್ರವೀಣ ಕುಲಕರ್ಣಿ (ಮೊ.7829766596) ಇವರನ್ನು ನೇಮಿಸಲಾಗಿದೆ.
ದೂರು ಮೇಲ್ವಿಚಾರಣೆ ತಂಡ ಮತ್ತು ಮತದಾರರ ಮಾಹಿತಿ ಮತ್ತು ಸಲಹಾ ಕೇಂದ್ರಕ್ಕೆ ನೇಮಕ ಮಾಡಲಾದ ಅಧಿಕಾರಿ ಹಾಗೂ ಸಿಬ್ಬಂದಿಗಳು ತಕ್ಷಣದಿಂದಲೇ ಕಾರ್ಯನಿರ್ವಹಿಸಿ ಲಿಖಿತವಾಗಿ / ಮೌಖಿಕವಾಗಿ / ದೂರವಾಣಿ ಮುಖಾಂತರ ಸ್ವೀಕೃತವಾದ ಎಲ್ಲಾ ರೀತಿಯ ಸಲಹೆ ಹಾಗೂ ದೂರುಗಳಿಗೆ ದಾಖಲಾಧಾರಿತವಾದ ವಹಿಯನ್ನು ನಿರ್ವಹಿಸಿ ನಿಯಮಾನುಸಾರ ವಿಲೇಗೊಳಿಸಿ ಕಾಲೋಚಿತಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.