Thursday, July 10, 2025
Google search engine

Homeರಾಜ್ಯಸುದ್ದಿಜಾಲಪ್ರತಿ ಪಂಚಾಯ್ತಿಗೆ ಕೃಷಿ ಪತ್ತಿನ ಸಹಕಾರ ಸಂಘ: ೧೦ ಹೊಸ ಸಂಘಗಳ ಆರಂಭಕ್ಕೆ ಯೋಜನೆ –...

ಪ್ರತಿ ಪಂಚಾಯ್ತಿಗೆ ಕೃಷಿ ಪತ್ತಿನ ಸಹಕಾರ ಸಂಘ: ೧೦ ಹೊಸ ಸಂಘಗಳ ಆರಂಭಕ್ಕೆ ಯೋಜನೆ – ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ದೊಡ್ಡಸ್ವಾಮೇಗೌಡ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್. ನಗರ: ಕ್ಷೇತ್ರದ ವ್ಯಾಪ್ತಿಗೆ ಸೇರಿದ ಸಾಲಿಗ್ರಾಮ ಮತ್ತು ಕೆ.ಆರ್.ನಗರ ತಾಲೂಕುಗಳಲ್ಲಿ ಪ್ರಸ್ತುತ ೨೪ ಕೃಷಿ ಪತ್ತಿನ ಸಹಕಾರ ಸಂಘಗಳಿದ್ದು, ಮುಂದಿನ ದಿನಗಳಲ್ಲಿ ಮತ್ತೆ ೧೦ ಸಂಘಗಳನ್ನು ಆರಂಭಿಸಿ ಪಂಚಾಯ್ತಿಗೊoದು ಸಂಘ ಕಾರ್ಯನಿರ್ವಹಿಸುವಂತೆ ಮಾಡಲು ಯೋಜನೆ ರೂಪಿಸುತ್ತೇನೆ ಎಂದು ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ದೊಡ್ಡಸ್ವಾಮೇಗೌಡ ಹೇಳಿದರು.

ತಾಲೂಕಿನ ಹಂಪಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ಸಂಘದ ವತಿಯಿಂದ ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆಯಾದ ತಮಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಇದರ ಜತೆಗೆ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿರುವ ಹೊಸ ಸದಸ್ಯರ ಸಾಲ ವಿತರಣೆಯ ಬಗ್ಗೆಯೂ ಗಮನ ಹರಿಸುತ್ತೇನೆ ಎಂದರು.

ಬ್ಯಾoಕಿನ ಆಡಳಿತ ಮಂಡಳಿಗೆ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ನಿರ್ದೇಶಕರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ-ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಮತ್ತು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಹೊಸ ಸದಸ್ಯರಿಗೆ ಸಾಲ ನೀಡಲು ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸುತ್ತೇವೆ ಎಂದರು.

ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕಿನಲ್ಲಿರುವ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಹೊಸ ಸದಸ್ಯರ ನೋಂದಣಿ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದ ನಿರ್ದೇಶಕರು ಸಂಘದ ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ಸಹಕಾರ ಬೇಕಿದ್ದರೂ ನೀಡಲು ಸಿದ್ದನಾಗಿದ್ದೇನೆ ಎಂದು ಭರವಸೆ ನೀಡಿದರು.

ಸಂಘಗಳಲ್ಲಿ ಸಾಲ ಪಡೆಯುವ ರೈತ ಸದಸ್ಯರು ಸಕಾಲದಲ್ಲಿ ಮರುಪಾವತಿ ಮಾಡಿ ಇತರೆ ಸದಸ್ಯರು ಸಾಲ ಪಡೆಯಲು ಸಹಕಾರ ನೀಡಬೇಕೆಂದು ಕೋರಿದ ದೊಡ್ಡಸ್ವಾಮೇಗೌಡ ಎರಡು ತಾಲೂಕುಗಳ ಸಂಘಗಳಿಗೆ ಎಂಸಿಡಿಸಿಸಿ ಬ್ಯಾಂಕಿನಿoದ ಹೆಚ್ಚು ಹಣ ಬಿಡುಗಡೆ ಮಾಡಿಸಿ ಅಗತ್ಯವಿರುವಷ್ಟು ಸಾಲ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನುಡಿದರು.

ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕೃಷಿ ಸಾಲ ಪಡೆದು ಹೆಚ್ಚು ಬಡ್ಡಿ ಪಾವತಿಸುವ ಬದಲು ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರಾಗಿ ಬಡ್ಡಿರಹಿತ ಸಾಲ ಪಡೆದು ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ನೀಡಿದರು.
ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ ಪ್ರತಿನಿಧಿಗಳ ವಿಶ್ವಾಸ ಮತ್ತು ರೈತರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸಲಿದ್ದು, ನನಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದರು.

ಎಂಸಿಡಿಸಿಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಎಸ್.ಸಿದ್ದೇಗೌಡ ಮಾತನಾಡಿ ದೊಡ್ಡಸ್ವಾಮೇಗೌಡ ಅವರನ್ನು ಬ್ಯಾಂಕಿನ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕಿನ ಸಹಕಾರಿಗಳು ಮುಖ್ಯಮಂತ್ರಿ, ಉಪ-ಮುಖ್ಯಮಂತ್ರಿ ಮತ್ತು ಸಹಕಾರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುವುದರ ಜತೆಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರ ಸಹಕಾರವನ್ನು ಕೋರುತ್ತೇವೆ ಎಂದರು.
ಹoಪಾಪುರ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಪಿ.ಪ್ರಶಾಂತ್ ಮಾತನಾಡಿದರು. ಈ ಸಂದರ್ಭದಲ್ಲಿ ದೊಡ್ಡಸ್ವಾಮೇಗೌಡ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಸಂಘದ ಉಪಾಧ್ಯಕ್ಷ ಶೀನಯ್ಯ, ನಿರ್ದೇಶಕರಾದ ಎಂ.ಎಸ್.ಅನoತು, ದಾಸೇಗೌಡ, ಸುಬ್ಬೇಗೌಡ, ಮಂಜುನಾಥ್, ಸಿದ್ದಮ್ಮ, ರತ್ನಮ್ಮ, ಕುಚೇಲ, ಹೆಚ್.ಆರ್‌ಗಿರೀಶ್, ಪಿ.ಎಸ್.ದೇವರಾಜು, ಮಂಜುನಾಥ್, ಹಂಪಾಪುರ ಗ್ರಾ.ಪಂ. ಮಾಜಿ ಅಧ್ಯಕ್ಷ ಹೆಚ್.ಕೆ.ನಾಗರಾಜು, ಸದಸ್ಯರಾದ ಹರಿರಾಜು, ಹೆಚ್.ಡಿ.ನಾಗೇಶ್, ಜಿಲ್ಲಾ ಬ್ಯಾಂಕಿನ ಪ್ರತಿನಿಧಿ ಟಿ.ಉಮೇಶ್, ಸಂಘದ ಮುಖ್ಯಕಾರ್ಯನಿರ್ವಾಹಕಾಧಿಕಾರಿ ಬಿ.ಎಸ್.ಜಯರಾಜು, ಕಾಂಗ್ರೆಸ್ ಮುಖಂಡ ಉಮಾಶಂಕರ್ ಹಾಜರಿದ್ದರು.

RELATED ARTICLES
- Advertisment -
Google search engine

Most Popular