ಅಹಮದಾಬಾದ್: ಗುಜರಾತ್ನ ಅಹಮದಾಬಾದ್ನಲ್ಲಿ ಮಧ್ಯಾಹ್ನ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತದಲ್ಲಿ ವಿಮಾನದಲ್ಲಿದ್ದ 241 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ
ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ” ಎಂದು ಪೊಲೀಸ್ ಕಮಿಷನರ್ ಜಿ.ಎಸ್. ಮಲಿಕ್ ಅವರು ಅಸೋಸಿಯೇಟೆಡ್ ಪ್ರೆಸ್ ಗೆ ಜೊತೆ ಮಾಹಿತಿ ಹಂಚಿಕೊಂಡಿದ್ದಾರೆ. ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿರುವುದರಿಂದ, “ಪತನಗೊಂಡ ಸ್ಥಳದಲ್ಲಿದ್ದ ಸ್ಥಳೀಯರೂ ಮೃತಪಟ್ಟಿರುವ ಸಾಧ್ಯತೆಯಿದೆ” ಎಂದು ಅವರು ಹೇಳಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ನ ಗ್ಯಾಟ್ವಿಕ್ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು.
ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು. ಈ ಪೈಕಿ 169 ಭಾರತೀಯರು, 53 ಬ್ರಿಟಿಷ್, 7 ಪೋರ್ಚುಗೀಸ್ ಮತ್ತು 1 ಕೆನಡಾದ ಪ್ರಜೆ ಇದ್ದರು ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ಪೊಲೀಸ್ ಆಯುಕ್ತ ಜಿ.ಎಸ್. ಮಲಿಕ್ ಅವರು, “ಪ್ರಸ್ತುತ ಪರಿಸ್ಥಿತಿಯಿಂದ ನೋಡಿದರೆ ಯಾರೂ ಬದುಕುಳಿದಿರುವ ಸಾಧ್ಯತೆ ಇಲ್ಲ” ಎಂದಿದ್ದಾರೆ.
ಈ ವಿಮಾನವನ್ನು 8,200 ಗಂಟೆಗಳ ಹಾರಾಟ ಅನುಭವ ಹೊಂದಿದ್ದ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು 1,100 ಗಂಟೆಗಳ ಅನುಭವ ಹೊಂದಿದ್ದ ಪ್ರಥಮ ಅಧಿಕಾರಿ ಕ್ಲೈವ್ ಕುಂದರ್ ನಿರ್ವಹಿಸುತ್ತಿದ್ದರು. ಇದು ಇತ್ತೀಚಿನ ದಶಕದ ಭಯಾನಕ ವಿಮಾನ ದುರಂತಗಳಲ್ಲಿ ಒಂದಾಗಿ ದಾಖಲಾಗಿದೆ.