Saturday, May 24, 2025
Google search engine

HomeUncategorizedರಾಷ್ಟ್ರೀಯರಾಜಸ್ಥಾನದಲ್ಲಿ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನ

ರಾಜಸ್ಥಾನದಲ್ಲಿ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನ

ರಾಜಸ್ಥಾನ: ಜೈಸಲ್ಮೇರ್‌ ನಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನಗೊಂಡಿದೆ.

ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೇನೆ ಆದೇಶಿಸಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್ ​ಗಳು ಸುರಕ್ಷಿತವಾಗಿದ್ದಾರೆ.

ಭಾರತೀಯ ವಾಯುಪಡೆಯ ಒಂದು ತೇಜಸ್ ವಿಮಾನವು ಇಂದು ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್‌ ನಲ್ಲಿ ಅಪಘಾತಕ್ಕೀಡಾಯಿತು. ಪೈಲಟ್ ಹೊರಬಂದಿದ್ದಾರೆ ಅಪಘಾತದ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ್ ಶಕ್ತಿ ತರಬೇತಿ ವೇಳೆ ಫೈಟರ್ ಜೆಟ್ ಜೈಸಲ್ಮೇರ್‌ ನಲ್ಲಿ ಪತನಗೊಂಡಿದೆ. ಫೈಟರ್ ಜೆಟ್ ಪತನವಾಗಿರುವ ಘಟನೆ ಜವಾಹರ್ ಕಾಲೋನಿ ಬಳಿ ನಡೆದಿದೆ. ಮಧ್ಯಾಹ್ನ 2 ಗಂಟೆಗೆ ಫೈಟರ್ ಜೆಟ್ ಹಾಸ್ಟೆಲ್ ಮೇಲ್ಛಾವಣಿಯ ಮೇಲೆ ಬಿದ್ದು ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿತು. ಹೇಗೋ ಇಬ್ಬರೂ ಪೈಲಟ್‌ ಗಳು ಫೈಟರ್ ಜೆಟ್‌ನಿಂದ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡರು.

RELATED ARTICLES
- Advertisment -
Google search engine

Most Popular