Wednesday, January 28, 2026
Google search engine

Homeರಾಜ್ಯಅಜಿತ್ ಪವಾರ್ ಅವರ ಸಾವು ಆಘಾತಕಾರಿ : ಡಿಕೆ ಶಿವಕುಮಾರ್

ಅಜಿತ್ ಪವಾರ್ ಅವರ ಸಾವು ಆಘಾತಕಾರಿ : ಡಿಕೆ ಶಿವಕುಮಾರ್

ಬೆಂಗಳೂರು : ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಈ ಬಗ್ಗೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಅಜಿತ್ ಪವಾರ್ ಅವರು ಅತ್ಯಂತ ಪ್ರಗತಿಪರ ಆಲೋಚನೆ ಹೊಂದಿದ್ದಂತಹ ನಾಯಕ. ಎಲ್ಲಾ ಕೆಲಸಗಳಿಗೂ ಸಹಕಾರ ಕೊಡುತ್ತಿದ್ದಾರೆ ಎಂದು ಮೊನ್ನೆಯಷ್ಟೇ ಮಹಾರಾಷ್ಟ್ರ ಮುಖ್ಯಮಂತ್ರಿಯವರು ಹೇಳಿದ್ದರು. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಕುಟುಂಬ ವರ್ಗ ಹಾಗೂ ಬೆಂಬಲಿಗರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಅವರ ಕುಟುಂಬಸ್ಥರು ಬೆಂಗಳೂರಿನಲ್ಲೂ ನೆಂಟಸ್ಥಿಕೆ ಬೆಳೆಸಿದ್ದಾರೆ. ಮಂಗಳವಾರ ಅವರ ಸಂಬಂಧಿಕರನ್ನು ಭೇಟಿಮಾಡಿದ್ದೇ ಎಂದರು.

ಅಜಿತ್ ಪವಾರ್ ಅವರು ಹಿರಿಯ ನಾಯಕರು. ರಾಜಕೀಯ ಭವಿಷ್ಯಕ್ಕಾಗಿ ಪಕ್ಷ ಬಿಟ್ಟು ಮರಳಿ ಬಂದರು. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಪ್ರಸ್ತುತ ಮಹಾರಾಷ್ಟ್ರ ಡಿಸಿಎಂ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದರು.

ಇತ್ತೀಚೆಗೆ ಹೆಚ್ಚು ವಿಮಾನ ಅಪಘಾತಗಳು ಆಗುತ್ತಿರುವ ಬಗ್ಗೆ ಹಾಗೂ ತಾಂತ್ರಿಕ ದೋಷ ಎಂದು ಹೇಳುತ್ತಿದ್ದಾರೆ ಎಂದಾಗ, ಇದರ ಬಗ್ಗೆ ವಿಸ್ತೃತ ವರದಿ ಬಂದ ನಂತರ ಮಾತನಾಡುತ್ತೇನೆ. ತಾಂತ್ರಿಕ ದೋಷದ ಬಗ್ಗೆ ನನಗೆ ಏನು ಗೊತ್ತು. ಮುಂಬೈನ ಗೆಳೆಯರು ಸೇರಿದಂತೆ ಹಲವರು ವಿಷಯ ತಿಳಿಸಿದ್ದಾರೆ” ಎಂದರು‌.

RELATED ARTICLES
- Advertisment -
Google search engine

Most Popular