Tuesday, May 20, 2025
Google search engine

Homeಅಪರಾಧಆಕಾಂಕ್ಷಾ ಎಸ್. ನಾಯರ್ ಆತ್ಮಹತ್ಯೆ ಪ್ರಕರಣ: ಕೇರಳ ಮೂಲದ ಪ್ರೊಫೆಸರ್ ಬಿಜಿಲ್ ಮ್ಯಾಥ್ಯೂ ಬಂಧನ, ವಿಚಾರಣೆ...

ಆಕಾಂಕ್ಷಾ ಎಸ್. ನಾಯರ್ ಆತ್ಮಹತ್ಯೆ ಪ್ರಕರಣ: ಕೇರಳ ಮೂಲದ ಪ್ರೊಫೆಸರ್ ಬಿಜಿಲ್ ಮ್ಯಾಥ್ಯೂ ಬಂಧನ, ವಿಚಾರಣೆ ಮುಂದುವರಿಕೆ

ಮಂಗಳೂರು (ದಕ್ಷಿಣ ಕನ್ನಡ): ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್.ನಾಯರ್ ಆತ್ಮಹತ್ಯೆ ಪ್ರಕರಣ ಸಂಬಂಧ ಪ್ರಕರಣ ದಾಖಲಿಸಿರುವ ಪಂಜಾಬ್ ಪೊಲೀಸರು, ಕೇರಳ ಮೂಲದ ಆರೋಪಿ ಪ್ರೊಫೆಸರ್ ಬಿಜಿಲ್ ಸಿ ಮ್ಯಾಥ್ಯೂ ಎಂಬಾತನನ್ನು ಮೇ 19 ರಂದು ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರಂಭದಲ್ಲಿ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಪೊಲೀಸರು, ಬಳಿಕ ಹಿರಿಯ ಅಧಿಕಾರಿಗಳ ಮಧ್ಯಪ್ರವೇಶದಿಂದ ಮನೆಯವರ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಆಕಾಂಕ್ಷ ಮೃತದೇಹವನ್ನು ಮೇ 19 ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು, ರಾತ್ರಿ ಮನೆಯವರಿಗೆ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದಾರೆ. ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ವಿಮಾನ ವ್ಯವಸ್ಥೆ ಮಾಡಿದ್ದು, ಅದರಂತೆ ಮೇ 20 ರಂದು ರಾತ್ರಿ 8 ಗಂಟೆಗೆ ಸ್ಪೈಸ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು, ಅಲ್ಲಿಂದ ಧರ್ಮಸ್ಥಳ ಬೊಳಿಯರ್ ಮನೆಗೆ ಆಂಬುಲೆನ್ಸ್ ಮೂಲಕ ಮೇ 21 ರಂದು ಬೆಳಗ್ಗೆ ಮೃತದೇಹ ಬರಲಿದೆ.

RELATED ARTICLES
- Advertisment -
Google search engine

Most Popular