ಮಂಗಳೂರು (ದಕ್ಷಿಣ ಕನ್ನಡ) : ಮಾಸ್ಕ್ ಮ್ಯಾನ್ ಬಂಧನದ ಬೆನ್ನಲ್ಲೇ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯನ್ನು ನೀಡಿದ್ದಾರೆ.
“ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ. ಕ್ಷೇತ್ರದ ಮೇಲಿನ ಅಭಿಮಾನ ಹೀಗೇ ಇರಲಿ,” ಎಂದು ಅವರು ತಿಳಿಸಿದ್ದಾರೆ. ಈ ಹೇಳಿಕೆಯ ಮೂಲಕ, ವಿಶೇಷ ತನಿಖಾ ದಳದ ತನಿಖೆಯಲ್ಲಿ ಆರೋಪಗಳ ದುರುದ್ದೇಶಪೂರಿತ ಸ್ವರೂಪ ಬಯಲಾಗುತ್ತಿದೆ ಎಂದು ಸೂಚಿಸಿದ್ದಾರೆ.
ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದಿದ್ದಾರೆ. ಅಲ್ಲದೇ ತನಿಖೆಯ ಹಂತದಲ್ಲಿ ಹೆಚ್ಚಿನದನ್ನು ಮಾತನಾಡುವುದಿಲ್ಲ ಎಂದಿದ್ದಾರೆ.