ಹೊಸದಿಲ್ಲಿ : ಪರೀಕ್ಷೆಯ ಸಮಗ್ರತೆಗೆ ಧಕ್ಕೆಯುಂಟಾಗಿದೆ ಎಂದು ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ ನೀಡಿದ ಪ್ರಾಥಮಿಕ ಮಾಹಿತಿಯಂತೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಜೂ.೧೮ ರಂದು ನಡೆದಿದ್ದ ಯುಜಿಸಿ-ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವುದಾಗಿ ಪ್ರಕಟಿಸಿದೆ.
ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು ಯುಜಿಸಿ-ನೀಟ್ ಜೂನ್ ೨೦೨೪ ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ ಎಂದು ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಹೊಸತಾಗಿ ನೆಟ್ ಪರೀಕ್ಷೆಯನ್ನು ನಡೆಸಲಾಗುವುದು. ಈ ಬಗ್ಗೆ ಮಾಹಿತಿಯನ್ನು ಪ್ರತ್ಯೇಕವಾಗಿ ಹಂಚಿಕೊಳ್ಳಲಾಗುವುದು. ಸಮಗ್ರ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗುತ್ತಿದೆ” ಎಂದು ಸಚಿವಾಲಯ ತಿಳಿಸಿದೆ.
ದೇಶದ ೩೧೭ ನಗರಗಳಲ್ಲಿ ೧೧.೨೧ ಲಕ್ಷಕ್ಕೂ ಹೆಚ್ಚು ನೋಂದಾಯಿತ ಅಭ್ಯರ್ಥಿಗಳಲ್ಲಿ ಸುಮಾರು ಶೇ.೮೧ರಷ್ಟು ಅಭ್ಯರ್ಥಿಗಳು ನೆಟ್ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಯುಜಿಸಿ ಅಧ್ಯಕ್ಷ ಎಂ ಜಗದೇಶ್ ಕುಮಾರ್ ಹೇಳಿದ್ದಾರೆ.