Tuesday, February 17, 2026
Google search engine

Homeಅಪರಾಧಕಾನೂನುವಿದ್ಯಾರ್ಥಿನಿಯರಿಗೆ ಲೈಂಗಿಕ  ಕಿರುಕುಳ ಆರೋಪ: ಶಿಕಾರಿಪುರದ ಇಬ್ಬರು ಶಿಕ್ಷಕರ ಅಮಾನತು

ವಿದ್ಯಾರ್ಥಿನಿಯರಿಗೆ ಲೈಂಗಿಕ  ಕಿರುಕುಳ ಆರೋಪ: ಶಿಕಾರಿಪುರದ ಇಬ್ಬರು ಶಿಕ್ಷಕರ ಅಮಾನತು

ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಿಕಾರಿಪುರ ತಾಲೂಕಿನ ಸೊಪ್ಪಿನಕೇರಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ. 

ಶಾಲೆಯ ಮುಖ್ಯ ಶಿಕ್ಷಕ ನಾಗರಾಜ್​​ ಕೋರಿ, ಸಹ ಶಿಕ್ಷಕ ಶಾಂತಕುಮಾರ್​​ ಅಮಾನತುಗೊಂಡಿದ್ದಾರೆ.

ಶಿಕ್ಷಕ ಶಾಂತಕುಮಾರ್ ವಿರುದ್ಧ ಲೈಂಗಿಕ ಕಿರುಕುಳ‌ ಆರೋಪ ಕೇಳಿಬಂದಿತ್ತು. ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆಪಾದನೆಯಿಂದಾಗಿ ಮುಖ್ಯ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಬಿಇಒ‌ ಪ್ರಕರಣದ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಡಿಡಿಪಿಐ ಅವರಿಗೆ ವರದಿ‌ ನೀಡಿದ್ದು, ವರದಿಯ ಆಧಾರದ ಮೇಲೆ‌ ಕ್ರಮಕೈಗೊಳ್ಳಲಾಗಿದೆ.

RELATED ARTICLES
- Advertisment -
Google search engine

Most Popular