ವರದಿ: ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮೆಲ್ಲರ ಸೇವೆ ಮಾಡಲು ನನಗೆ ಮತ ನೀಡುವ ಮೂಲಕ ಅವಕಾಶ ಮಾಡಿಕೊಡಿ ಎಂದು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಬೆಟ್ಟದಪುರ ಸಮೀಪದ ಬೆಟ್ಟದತುಂಗಾ ಗ್ರಾಮದಲ್ಲಿ ಸೋಮವಾರ ಆಯೋಜಿಸಿದ ಮತಯಾಚನೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ದೇಶವು ಭಾರತದ ಕಡೆ ನೋಡುವಂತೆ ಮಾಡಿದಂತ ಏಕೈಕ ನಾಯಕನೆಂದರೆ ಅದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಾಗಿದ್ದಾರೆ. ಅವರ ನಾಯಕತ್ವದಲ್ಲಿ ಈ ಬಾರಿಯೂ ದೇಶ ಮುಂದುವರೆಯಲಿದ್ದು, ಮೋದಿಯವರ ನಾಯಕತ್ವದ ಸರ್ಕಾರದ ಹಲವಾರು ಸೌಲಭ್ಯಗಳನ್ನು ಪ್ರತಿಯೊಬ್ಬರೂ ಸದುಪಯೋಗ ಮಾಡಿಕೊಂಡಿದ್ದಾರೆ. ಹಾಗಾಗಿ ಜನರು ಮತ್ತೆ ಮೋದಿ ಸರ್ಕಾರದ ನೀರಿಕ್ಷೆಯಲ್ಲಿದ್ದಾರೆ ಎಂದರು.
ಮೈಮುಲ್ ಅಧ್ಯಕ್ಷ ಪಿ.ಎಂ ಪ್ರಸನ್ನ ಮಾತನಾಡಿ ಮಂಗಳವಾರ ಸಂಜೆ 5 ಗಂಟೆಗೆ ಪಿರಿಯಾಪಟ್ಟಣಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ನಮ್ಮ ಮೈತ್ರಿ ಅಭ್ಯರ್ಥಿಯಾಗಿರುವ ಯದುವೀರ್ ಅವರ ಪರವಾಗಿ ಮತಯಾಚನೆ ಮಾಡಲು ಬರುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಮೂಲಕ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕು ಎಂದು ಹೇಳಿದರು.
ಇದೆ ಸಂದರ್ಭದಲ್ಲಿ ಬೆಟ್ಟದಪುರ, ಹರದೂರು, ಅತ್ತಿಗೋಡು, ಕಿತ್ತೂರು ಗ್ರಾಮಗಳಲ್ಲಿ ತೆರದ ವಾಹನದಲ್ಲಿ ರೋಡ್ ಶೋ ಮಾಡುವ ಮೈತ್ರಿ ಪಕ್ಷದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಮಹದೇವ್, ಎಚ್.ಸಿ ಬಸವರಾಜು, ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಬಿಜೆಪಿ ಘಟಕದ ಅಧ್ಯಕ್ಷ ರಾಜೇಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೀತಿ ಅರಸ್, ಮುಖಂಡರಾದ ಕೌಲನಹಳ್ಳಿ ಸೋಮಶೇಖರ್, ಕಿರಣ್ ಜೈರಾಮ್, ರಾಜೆಗೌಡ, ಹೇಮಂತಗೌಡ, ನಳಿನಿ, ಪ್ರಶಾಂತಗೌಡ, ವಿಕ್ರಂರಾಜು, ಆರ್.ಟಿ ಸತೀಶ್, ಸತ್ಯರಾಜೇ ಅರಸ್, ಮೋಹನ್, ಗಾಯಿತ್ರಿ, ಸುನಿತ, ಮಂಜುನಾಥ ಸೇರಿದಂತೆ ಹಲವರು ಇದ್ದರು.