Saturday, December 6, 2025
Google search engine

HomeUncategorizedರಾಷ್ಟ್ರೀಯಅಂಬೇಡ್ಕರ್‌ ಪರಿನಿಬ್ಬಾಣ ದಿನ : ಪ್ರಧಾನಿ ಮೋದಿ ನಮನ

ಅಂಬೇಡ್ಕರ್‌ ಪರಿನಿಬ್ಬಾಣ ದಿನ : ಪ್ರಧಾನಿ ಮೋದಿ ನಮನ

ನವದೆಹಲಿ : ಭಾರತದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಪುಣ್ಯತಿಥಿಯಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಮಹಾಪರಿನಿರ್ವಾಣ ದಿನದಂದು ಡಾ.ಬಾಬಾಸಾಹೇಬ್‌ ಅಂಬೇಡ್ಕರ್‌ ಅವರನ್ನು ಸ್ಮರಿಸಲಾಗುತ್ತಿದೆ. ಅವರ ದಾರ್ಶನಿಕ ನಾಯಕತ್ವ ಮತ್ತು ನ್ಯಾಯ, ಸಮಾನತೆ, ಸಾಂವಿಧಾನಿಕತೆಗೆ ಅಚಲವಾದ ಬದ್ಧತೆ ನಮ್ಮ ರಾಷ್ಟ್ರೀಯ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದು ಮೋದಿ ತಮ್ಮ X ಖಾತೆಯಲ್ಲಿ ಪೋಸ್ಟ್‌ ಮಾಡುವ ಮುಖಾಂತರ ಗೌರವ ಸಲ್ಲಿಸಿದ್ದಾರೆ.

ಮಾನವ ಘನತೆಯನ್ನು ಎತ್ತಿಹಿಡಿಯಲು ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸಲು ಅಂಬೇಡ್ಕರ್‌ ಪೀಳಿಗೆಗೆ ಸ್ಫೂರ್ತಿ ನೀಡಿದರು ಎಂದು ಪ್ರಧಾನಿ ತಿಳಿಸಿದ್ದಾರೆ. ವಿಕಸಿತ್‌ ಭಾರತವನ್ನು ನಿರ್ಮಿಸುವತ್ತ ನಾವು ಕೆಲಸ ಮಾಡುತ್ತಿರುವಾಗ ಅವರ ಆದರ್ಶಗಳು ನಮ್ಮ ಹಾದಿಯನ್ನು ಬೆಳಗಿಸುತ್ತಿರಲಿ ಎಂದು ಹೇಳಿದ್ದಾರೆ.

ಈ ವೇಳೆ ಸಂಸತ್ತು ಭವನದ ಆವರಣದಲ್ಲಿರುವ ಪ್ರೇರಣಾ ಸ್ಥಳದಲ್ಲಿರುವ ಅಂಬೇಡ್ಕರ್‌ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವಲ್ಲಿ ಪ್ರಧಾನಿಯೂ ಸಹ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್‌ ಅವರೊಂದಿಗೆ ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular