ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಝ್ ಅವರನ್ನು ಮುಖ್ಯಮಂತ್ರಿಯ ಅಪರ ಮುಖ್ಯ ಕಾರ್ಯದರ್ಶಿಯನ್ನಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆಯನ್ನು ಅಂಜುಮ್ ಪರ್ವೇಝ್ ಅವರಿಗೆ ವಹಿಸಿ ಆದೇಶಿಸಲಾಗಿದೆ.