Saturday, August 2, 2025
Google search engine

Homeರಾಜ್ಯಅರ್ಜುನ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪನೆ : ಸಚಿವ ಈಶ್ವರ ಬಿ. ಖಂಡ್ರೆ

ಅರ್ಜುನ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪನೆ : ಸಚಿವ ಈಶ್ವರ ಬಿ. ಖಂಡ್ರೆ

ಬೀದರ್: ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮವಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದೆ. ಆಗಸ್ಟ್ 4ರಂದು ನಡೆಯುವ ಗಜಪಯಣದಲ್ಲಿ ಈ ಪ್ರಶಸ್ತಿಯನ್ನು ಮಾವುತ ಅಥವಾ ಸಿಬ್ಬಂದಿಗೆ ಪ್ರದಾನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಜುನನ ಹೆಸರಲ್ಲಿ ಪ್ರಶಸ್ತಿ ಸ್ಥಾಪಿಸುವ ಸಲಹೆಯನ್ನು ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ನೀಡಿದ್ದರು. ಈ ಸಲಹೆಯನ್ನು ಅನುಸರಿಸಿ, ವನ್ಯಜೀವಿ ಸೆರೆ ಕಾರ್ಯಚರಣೆಯಲ್ಲಿ ತೊಡಗಿಕೊಂಡು ಯಶಸ್ಸು ಸಾಧಿಸಿದ ಮಾವುತರಿಗೆ ಗೌರವ ಸೂಚಿಸುವ ಉದ್ದೇಶದಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ.

1968ರಲ್ಲಿ ಕಾಕನಕೋಟೆಯಲ್ಲಿ ಸೆರೆಹಿಡಿಯಲ್ಪಟ್ಟ ಅರ್ಜುನ, 22 ಬಾರಿ ಜಂಬೂ ಸವಾರಿಯಲ್ಲಿ ಪಾಲ್ಗೊಂಡಿದ್ದ. ಅವನು 8 ಬಾರಿ 750 ಕೆ.ಜಿ ಚಿನ್ನದ ಅಂಬಾರಿ ಹೊತ್ತಿದ್ದ. ಆತನ ಹೆಸರನ್ನು ಸ್ಮರಿಸಲು ಈ ಪ್ರಶಸ್ತಿ ಸ್ಥಾಪಿಸಲಾಗಿದೆ.

ಆ.4ರಂದು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಗಜ ಪಯಣದ ಸಂದರ್ಭದಲ್ಲಿ ಹಾಸನ, ಸಕಲೇಶಪುರ, ಕೊಡಗು ಮೊದಲಾದ ಕಡೆಗಳಲ್ಲಿ ಆನೆ ಮತ್ತು ವನ್ಯಜೀವಿ ಸೆರೆ ಕಾರ್ಯಚರಣೆಗಳಲ್ಲಿ ಯಶಸ್ವಿಯಾಗಿ ಭಾಗಿಯಾಗಿರುವ ಭೀಮ ಆನೆಯ ಮಾವುತ ಗುಂಡ ಹಾಗೂ ಕವಾಡಿ ನಂಜುಂಡಸ್ವಾಮಿ ಅವರಿಗೆ 2025ರ ಸಾಲಿನ ಅರ್ಜುನ ಆನೆ ಪ್ರಶಸ್ತಿ ನೀಡಲು 2025ರ ದಸರಾ ಆನೆಗಳ ಆಯ್ಕೆ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

RELATED ARTICLES
- Advertisment -
Google search engine

Most Popular