Monday, January 12, 2026
Google search engine

Homeಅಪರಾಧಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಐಟಿ ಕಂಪನಿ ಭಸ್ಮ

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಐಟಿ ಕಂಪನಿ ಭಸ್ಮ

ಬೆಂಗಳೂರು: ನಗರದಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಐದು ಅಂತಸ್ತಿನ ಬಿಲ್ಡಿಂಗ್ ಭಾಗಶಃ ಭಸ್ಮವಾದ ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರೋಡ್ ನಲ್ಲಿ ನಡೆದಿದೆ. ಸದ್ಯ ಭಾರೀ ಅನಾಹುತ ತಪ್ಪಿದ್ದು ಕಟ್ಟಡದಲ್ಲಿ ಸಿಲುಕಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ 12 ಗಂಟೆ ಸುಮಾರಿಗೆಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಸೆಕ್ಯೂರಿಟೀಸ್‌ಗಳನ್ನ ಅಗ್ನಿಶಾಮಕದಳ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆಯಲ್ಲಿ ಐಟಿ ಕಂಪನಿಯ ದಾಖಲೆಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

RELATED ARTICLES
- Advertisment -
Google search engine

Most Popular