Friday, August 29, 2025
Google search engine

Homeರಾಜ್ಯಸುದ್ದಿಜಾಲವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ https://shp.karnataka.gov.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿರುತ್ತದೆ. ವಿದ್ಯಾರ್ಥಿನಿಲಯಗಳ ವಿವರ : ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, ದಾವಣಗೆರೆ. 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 1 & 2 , ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ, ಹರಿಹರ, ದಾವಣಗೆರೆ. ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ದಾವಣಗೆರೆ. ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಜಗಳೂರು ಟೌನ್, ದಾವಣಗೆರೆ. ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಎಂ.ಸಿ,ಸಿ ಬಿ ಬ್ಲಾಕ್, ದಾವಣಗೆರೆ. 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಕೆ.ಟಿ.ಜೆ ನಗರ, ದಾವಣಗೆರೆ 1 & 2 ಇಲ್ಲಿ ಪ್ರವೇಶ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: :08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಛೇರಿ ದೂರವಾಣಿ : 08192-250066 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ,

RELATED ARTICLES
- Advertisment -
Google search engine

Most Popular