ಚಾಮರಾಜನಗರ: ಮೀನುಗಾರಿಕೆ ಇಲಾಖೆ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ರಾಜ್ಯ ವಲಯ ಯೋಜನೆಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರದ ವಾಹನ ಖರೀದಿಗಾಗಿ ಸಹಾಯಧನ ನೀಡಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ವಾಹನ ಖರೀದಿಸಲು ಘಟಕ ವೆಚ್ಚ ೬ ಲಕ್ಷ ರೂ. ಗಳಲ್ಲಿ ಶೇ.೫೦ ರಷ್ಟು ಅಂದರೆ ೩ ಲಕ್ಷ ರೂ. ಸಹಾಯಧನ ನೀಡಲಾಗುವುದು. ಆಸಕ್ತರು ಆಯಾಯ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸೆಪ್ಟೆಂಬರ್ ೧೫ ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಗುಂಡ್ಲುಪೇಟೆ, ಚಾಮರಾಜನಗರ, ಯಳಂದೂರು ತಾಲೂಕಿಗೆ ಸಂಬAಧಿಸಿದAತೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಪ್ರಭಾರ) ಮೊ.ಸಂ ೮೬೬೦೪೭೪೪೧೫, ಕೊಳ್ಳೇಗಾಲ ತಾಲೂಕಿಗೆ ಸಂಬಂಧಿಸಿದಂತೆ ಮೀನುಗಾರಿಕೆ ಸಹಾಯಕ ನಿರ್ದೇಶಕರು (ಪ್ರಭಾರ) ಮೊ.ಸಂ ೮೭೨೨೦೦೦೧೦೨ ಸಂಪರ್ಕಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.