Friday, September 12, 2025
Google search engine

Homeರಾಜ್ಯಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಂಘಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ಪ್ರದೇಶಗಳಾದ ಕಾವೇರಿನಗರದಲ್ಲಿ ಒಟ್ಟು ಪಡಿತರ ಚೀಟಿ- 820, ಥಣಿಸಂದ್ರದಲ್ಲಿ ಒಟ್ಟು ಪಡಿತರ ಚೀಟಿ- 845 ಮತ್ತು ಕೆ.ಚನ್ನಸಂದ್ರದಲ್ಲಿ ಒಟ್ಟು ಪಡಿತರ ಚೀಟಿ- 900 ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳಿಗೆ ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ.

ಹೊಸ ನ್ಯಾಯಬೆಲೆ ಅಂಗಡಿ ಪ್ರಾಧಿಕಾರ ಪಡೆಯಲು ತಾಲ್ಲೂಕು ಕೃಷಿ ಪ್ರಾಥಮಿಕ ಪತ್ತಿನ ಮಾರಾಟ ಸರ್ಕಾರ ಸಂಘ, ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ವ್ಯವಸಾಯೋತ್ಪನ್ನ ಸಹಕಾರ ಸಂಘ, ತೋಟಗಾರಿಕಾ ಉತ್ಪನ್ನಗಳ ಬಳಕೆದಾರರ ಸಹಕಾರ ಸಂಘ, ನೊಂದಾಯಿತ ಸಹಕಾರ ಸಂಘಗಳು, ನೊಂದಾಯಿತ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘಗಳು, ಬೃಹತ್ ಪ್ರಮಾಣದ ಆದಿವಾಸಿ ವಿವಿದ್ದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ನೇಕಾರರ ಸಹಕಾರ ಸಂಘಗಳು, ನೊಂದಾಯಿತ ಮಹಿಳಾ ವಿವಿದೋದ್ದೇಶ ಸಹಕಾರ ಸಂಘಗಳು, ನೊಂದಾಯಿತ ವಿವಿದೋದ್ದೇಶ ಸಹಕಾರ ಸಂಘಗಳು, ದೈಹಿಕ ಅಂಗವಿಕಲ ಕಲ್ಯಾಣ ಸಹಕಾರ ಸಂಘಗಳು, ಬ್ಯಾಂಕ್ ಗಳನ್ನು ನಡೆಸುತ್ತಿರುವ ಸಹಕಾರ ಸಂಘಗಳು ಅಥವಾ ಸಹಕಾರ ಬ್ಯಾಂಕ್ ಗಳು, ಸ್ತೀ ಶಕ್ತಿ ಸಂಘಗಳು/ಮಹಿಳಾ ಸ್ವ ಸಹಾಯ ಸಂಘಗಳು (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ನೊಂದಣಿಯಾಗಿರಬೇಕು), ವಿಕಲಚೇತನರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೂ (ಇತರರು) ಅವಕಾಶವನ್ನು ಕಲ್ಪಿಸಲಾಗಿದೆ.

ಅರ್ಹ ಸಂಸ್ಥೆಗಳು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಇಲ್ಲಿ 2025ರ ಸೆಪ್ಟೆಂಬರ್ 15 ರಿಂದ 2025ರ ಅಕ್ಟೋಬರ್ 14ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular