8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:166/2017, ಕಲಂ 379 r/w 34 IPC ನೇ ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಕೇರಳ ಮಲಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕ ಕೃಷ್ಣಕಾಂತ ಕೆ ಹಾಗೂ ಸಿಬ್ಬಂದಿಗಳಾದ ಹೆಚ್ ಸಿ 314 ಸಂತೋಷ್ ಪಿಸಿ 2462 ಶಿವಾನಂದ ಮಡ್ಡಿ ರವರು ಮಾಹಿತಿ ಸಂಗ್ರಹಿಸಿ, ಆರೋಪಿಯನ್ನು ತಮಿಳುನಾಡು ರಾಜ್ಯದ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಎಂಬಲ್ಲಿ ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.



