ದರೋಡೆ ಹಾಗೂ 34 ಐಪಿಸಿ ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ತಲೆಮರೆಸಿದ ವಾರಂಟ್ ಅಸಾಮಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ನಂಜುಂಡ, ಬಂಧಿತ ವ್ಯಕ್ತಿ. ದಿನಾಂಕ 08-04-2017 ರಂದು ರೆಖ್ಯಾ ಎಂಬಲ್ಲಿ ದರೋಡೆ ಮಾಡಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
- ಮಂಗಳೂರಿನಿಂದ ಶಂಶೀರ್ ಬುಡೋಳಿ



