ಪಿರಿಯಾಪಟ್ಟಣ: ಸಂವಿಧಾನ ಶಿಲ್ಪಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮೈಸೂರು ಜಿಲ್ಲೆ ಹಾಗೂ ಪಿರಿಯಾಪಟ್ಟಣ ತಾಲೂಕು ಸಮಿತಿ ವತಿಯಿಂದ ತಾಲೂಕಿನ ಉತ್ತೇನಹಳ್ಳಿ ಹಾಡಿ ಜೇನು ಕುರುಬ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ಪೆನ್ಸಿಲ್ ಸಾಮಗ್ರಿಗಳನ್ನು ನೀಡಲಾಯಿತು. ಈ ಸಂದರ್ಭ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯ ಕಾರ್ಯದರ್ಶಿ ಮತ್ತು ಮೈಸೂರು ಜಿಲ್ಲಾಧ್ಯಕ್ಷ ಎಂಕೆ ಕಾಂತರಾಜ್ ,ಜಿಲ್ಲಾ ಉಪಾಧ್ಯಕ್ಷ ದಾಸರಾಜ್, ಪ್ರಧಾನ ಕಾರ್ಯದರ್ಶಿ ಸುಭಾಷ್, ತಾಲೂಕು ಅಧ್ಯಕ್ಷ ಮಂಜು ಆಯ್ತನಹಳ್ಳಿ, ಪ್ರಧಾನ ಕಾರ್ಯದರ್ಶಿ ಮಹದೇವ್ ,ತಾಲೂಕು ಯುವ ಘಟಕದ ಅಧ್ಯಕ್ಷ ರಮೇಶ್, ಸದಸ್ಯ ಮಣಿಕಂಠ, ಶಾಲಾ ಶಿಕ್ಷಕಿ ಆಶಾ, ಮಮತಾ, ಮತ್ತು ಶಾಲಾ ಮಕ್ಕಳು ಹಾಜರಿದ್ದರು.