ಶ್ರೀರಂಗಪಟ್ಟಣ: ಆಷಾಡ ಮಾಸದ ಮೊದಲ ಶುಕ್ರವಾರದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಗೆ ಭತ್ತದ ತೆನೆಯಿಂದ ವಿಶೇಷ ಅಲಂಕಾರ ಮಾಡಲಾಗಿದ್ದು ಭಕ್ತರ ಗಮನ ಸೆಳೆಯುತ್ತಿದೆ.
ದೇವಾಲಯದ ಅರ್ಚಕ ಲಕ್ಷ್ಮೀಶ್ ನೇತೃತ್ವದಲ್ಲಿ ಅಲಂಕಾರ ಮಾಡಲಾಗಿದ್ದು, ದೇವಾಲಯಕ್ಕೆ ನೂರಾರು ಭಕ್ತರು ಆಗಮಿಸಿ ದೇವಿಗೆ ಪೂಜೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ.



