Monday, June 29, 2026
Google search engine

Homeರಾಜಕೀಯಬಿಜೆಪಿ ಯಿಂದ ಮತದಾರರ ಹಕ್ಕು ಕಸಿಯುವ ಯತ್ನ : ಸಿದ್ದರಾಮಯ್ಯ ಆರೋಪ

ಬಿಜೆಪಿ ಯಿಂದ ಮತದಾರರ ಹಕ್ಕು ಕಸಿಯುವ ಯತ್ನ : ಸಿದ್ದರಾಮಯ್ಯ ಆರೋಪ

ಮೈಸೂರು : ಎಸ್‌ಐಆರ್ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಸಾವರ್ಕರ್ ಕ್ಷಮಾಪಣೆ ಕೇಳಿ ಜೈಲಿನಿಂದ ಹೊರಬಂದವರು. ಅವರನ್ನು ವೈಭವೀಕರಿಸುವವರ ಹಿಂಬಾಲಕರು ದೇಶ ಉಳಿಸುತ್ತಾರೆಯೇ?” ಎಂದು ಪ್ರಶ್ನಿಸಿದರು. ಹೆಡ್ಗೆವಾರ್ ಮತ್ತು ಗೋಲ್ವಾಲ್ಕರ್ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದಾರೆಯೇ ಎಂದು ಕೇಳಿದ ಅವರು, ಮುಂದಿನ ಒಂದು ತಿಂಗಳು ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

1950ರಲ್ಲಿ ಚುನಾವಣಾ ಆಯೋಗ ರಚನೆಯಾಗಿ 1952ರಲ್ಲಿ ಮೊದಲ ಚುನಾವಣೆ ನಡೆದಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಲೇ ಬಂದಿದೆ. ಆದರೆ ಅರ್ಹ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಅಧಿಕಾರ ಆಯೋಗಕ್ಕೆ ಇಲ್ಲ. ಅದು ಸಂವಿಧಾನಬದ್ಧವಾಗಿ ಕಾರ್ಯನಿರ್ವಹಿಸಬೇಕು. 2014ರ ನಂತರ ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಆರೋಪಿಸಿದರು.

ದೇಶದ 141 ಕೋಟಿ ಜನಸಂಖ್ಯೆಯಲ್ಲಿ 96 ಕೋಟಿ ಮತದಾರರಿದ್ದು, ಅನೇಕ ಕ್ಷೇತ್ರಗಳಲ್ಲಿ ಸಾವಿರದಿಂದ ಐದು ಸಾವಿರ ಮತಗಳ ಅಂತರದಲ್ಲಿ ಫಲಿತಾಂಶ ನಿರ್ಧಾರವಾಗುತ್ತದೆ. ಅಂಥ ಕ್ಷೇತ್ರಗಳಲ್ಲಿ ಮತಗಳನ್ನು ಕೈಬಿಟ್ಟರೆ ಗೆಲುವಿನ ಮೇಲೆ ಪರಿಣಾಮ ಬೀಳುತ್ತದೆ. ಕಾಂಗ್ರೆಸ್ ಬೆಂಬಲಿಸುವ ಬಡವರು, ರೈತರು, ಕಾರ್ಮಿಕರು ಹಾಗೂ ಅಲ್ಪಸಂಖ್ಯಾತರ ಮತಗಳೇ ಬಿಜೆಪಿ ಗುರಿಯಾಗಿವೆ ಎಂದು ಹೇಳಿದರು.

ಬಿಜೆಪಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿ ಪಕ್ಷವಾಗಿದ್ದು, ಸರ್ವಾಧಿಕಾರದಲ್ಲಿ ನಂಬಿಕೆ ಹೊಂದಿದೆ. ಹಿಂದೂತ್ವದ ಹೆಸರಿನಲ್ಲಿ ಜಾತಿ ಆಧಾರಿತ ಶೋಷಣೆ ಮುಂದುವರಿಸಲಾಗುತ್ತಿದೆ. ಶೂದ್ರ ಸಮುದಾಯ ಬಿಜೆಪಿ ಜೊತೆ ಹೋಗಬಾರದು. ಸುಳ್ಳನ್ನು ಸೃಷ್ಟಿಸಿ ಅದನ್ನೇ ಸತ್ಯವೆಂದು ಬಿಂಬಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಟೀಕಿಸಿದರು.

ಜುಲೈ ತಿಂಗಳಲ್ಲಿ ಬಿಎಲ್‌ಒಗಳೊಂದಿಗೆ ಮನೆಮನೆಗೆ ತೆರಳಿ ಮತದಾರರ ಪರಿಶೀಲನೆ ನಡೆಸಬೇಕು. ಪ್ರತಿ ಬೂತ್‌ಗೆ ಇಬ್ಬರು ಸ್ಥಳೀಯರನ್ನು ಆಯ್ಕೆ ಮಾಡಿ, ಪ್ರಜಾಪ್ರಭುತ್ವ, ಸಂವಿಧಾನ ಮತ್ತು ದೇಶವನ್ನು ಉಳಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಕರೆ ನೀಡಿದರು.

RELATED ARTICLES
- Advertisment -
Google search engine

Most Popular