Saturday, June 14, 2025
Google search engine

Homeರಾಜ್ಯಸುದ್ದಿಜಾಲಜೂ. 26 ರಂದು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ: ಡಾ. ಕುಮಾರ

ಜೂ. 26 ರಂದು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ: ಡಾ. ಕುಮಾರ


ಮಂಡ್ಯ: ಜಿಲ್ಲೆಯಲ್ಲಿ ಜೂನ್ 26 ರಂದು ಅಂತಾರಾಷ್ಟ್ರೀಯ ಮಾದಕ ವ್ಯಸನ ತಡೆ ದಿನ (international drug abuse preventtion day)ದಿನದ ಪ್ರಯುಕ್ತ ಜಿಲ್ಲೆಯಲ್ಲಿ ಮಾದಕ, ಮದ್ಯ ಮತ್ತು ತಂಬಾಕಿನ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಾರ್ಕೋ ಸಮನ್ವಯ ಕೇಂದ್ರದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಜೂನ್ 26 ರಂದು ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾದಕ, ಮದ್ಯ ಮತ್ತು ತಂಬಾಕಿನ ದುಷ್ಪರಿಣಾಮ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

 ಇಂಜಿನಿಯರಿAಗ್ ಹಾಗೂ ಮೆಡಿಕಲ್ ಕಾಲೇಜ್ ಗಳಲ್ಲಿ ಮಾದಕ ವಸ್ತುಗಳ ಸೇವನೆಯ ಸಾಧ್ಯತೆ ಹೆಚ್ಚಿದ್ದು, ಕಾಲೇಜುಗಳಲ್ಲಿ ಮಾದಕ ವಸ್ತುಗಳ ರವಾನೆಯಾಗುತ್ತಿದೆಯೇ ಎಂದು ಗಮನವಹಿಸಿ ಮತ್ತು ಕಾಲೇಜಿನ ಹತ್ತಿರದ ಅಂಗಡಿಗಳಲ್ಲಿ ಮಾದಕ ವಸ್ತುಗಳ ಮಾರಾಟವಾಗುತ್ತಿದೆಯೇ ಎಂದು ಗಂಭೀರವಾಗಿ ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

 ಅರಣ್ಯಗಳಲ್ಲಿ ಮಾದಕ ಪದಾರ್ಥಗಳನ್ನು ಅಕ್ರಮವಾಗಿ ಬೆಳೆಸುವ ಸಾಧ್ಯತೆ ಇರುತ್ತದೆ. ಆಗಾಗಿ ಅರಣ್ಯ ಇಲಾಖೆಯವರು ಸಂಶಯಾಸ್ಪದವಾಗಿ ಮಾದಕ ವಸ್ತುಗಳನ್ನು ಬೆಳೆಸುವುದು ಹಾಗೂ ಸಾಗಾಣಿಕೆ ಮಾಡುವುದು ಕಂಡುಬAದಲ್ಲಿ ಪರಿಶೀಲಿಸಿ ಕ್ರಮಕೈಗೊಳ್ಳಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹೇಳಿದರು.

ಕೆಲವೊಂದು ಬೆಳೆಗಳ ಜೊತೆಗೆ ಮಾದಕ ವಸ್ತುಗಳನ್ನು ಬೆಳೆಯುವ ಸಾಧ್ಯತೆಯಿರುವ ಕಾರಣ ತೋಟಗಾರಿಕೆ ಇಲಾಖೆಯವರು ನಿಗಾವಹಿಸಿ ಮತ್ತು ರೈತರಲ್ಲಿ ಮಾದಕ ವಸ್ತುಗಳಿಂದ ಉಂಟಾಗುವ ಅಪಾಯದ ಬಗ್ಗೆ ಅರಿವು ಮೂಡಿಸಿ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಇತ್ತೀಚಿಗೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ 12 ಕೆಜಿ ಗಾಂಜಾ ಪತ್ತೆಯಾಗಿರುವ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ಮತ್ತು ಇದನ್ನು ಪ್ರೋತ್ಸಾಹಿಸಿದ ಅಪರಾಧಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಹೇಳಿದರು.

 ಶಾಲಾ ಕಾಲೇಜಿನ ಸುತ್ತ-ಮುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳು, ಮದ್ಯ ಹಾಗೂ ತಂಬಾಕು ವ್ಯಾಪಾರಾಗುತ್ತಿಯೇ ಎಂದು ಶಿಕ್ಷಣ ಇಲಾಖೆಯವರು ಪರಿಶೀಲಿಸಿ ವರದಿ ನೀಡಬೇಕು ಎಂದು ಶಿಕ್ಷಣ ಇಲಾಖೆಗೆ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ ಜಿಲ್ಲೆಯಲ್ಲಿ ಮಾದಕ ವಸ್ತುಗಳು, ಮದ್ಯ ಹಾಗೂ ತಂಬಾಕಿನಿAದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜೂನ್ 26 ರಂದು ಅರಿವು ಮೂಡಿಸಬೇಕೆಂಬ ಉದ್ದೇಶವಿದ್ದು, ಜಿಲ್ಲೆಯ ಪ್ರತಿ ಶಾಲಾ, ಕಾಲೇಜುಗಳಲ್ಲಿ ನಿರ್ದೇಶಕಯ ಮತ್ತು ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಆಯೋಜಿಸಿ ಎಂದು ಶಿಕ್ಷಣ ಇಲಾಖೆಯವರಿಗೆ ತಿಳಿಸಿದರು.

 ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಮೋಹನ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚೆಲುವಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವರಾಮೇಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular