Friday, January 30, 2026
Google search engine

Homeರಾಜ್ಯಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ 'ಆಯುಷ್ ಹಬ್ಬ - 2026'

ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ‘ಆಯುಷ್ ಹಬ್ಬ – 2026’

ಮಂಗಳೂರಿನ ಡಾ.ಟಿ.ಎಂ.ಎ. ಪೈ ಇಂಟರ್ನ್ಯಾಷನಲ್ ಕನ್ವೆನ್ಸನ್ ಸೆಂಟರ್‌ನಲ್ಲಿ ಜನವರಿ 31 ಮತ್ತು ಫೆಬ್ರವರಿ 1 ರಂದು ಎರಡು ದಿನಗಳ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ‘ಆಯುಷ್ ಹಬ್ಬ – 2026’ ಹಲವು ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರ ಆರೋಗ್ಯದಲ್ಲಿ ಮಹತ್ತರವಾದ ಪ್ರಭಾವವನ್ನು ಬೀರಲಿದೆ ಎಂದು ಸಮಿತಿಯ ಗೌರವಾಧ್ಯಕ್ಷೆ ಡಾ. ಆಶಾ ಜ್ಯೋತಿ ರೈ ಮಾಲಾಡಿ ತಿಳಿಸಿದ್ದಾರೆ.
ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಯುಷ್ ಹಬ್ಬ ಸಮಿತಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಆಯುಷ್ ಮಹಾವಿದ್ಯಾಲಯಗಳು, ವಿವಿಧ ಆಯುಷ್ ವೈದ್ಯ ಸಂಘಟನೆಗಳು ಹಾಗೂ ವೃತ್ತಿನಿರತ ಆಯುಷ್ ವೈದ್ಯರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಜನವರಿ 31 ರಂದು ನಡೆಯುವ ಕಾರ್ಯಕ್ರಮವನ್ನು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಕೊಂಡೆವೂರು, ಅತಿ ವಂದನೀಯ ಡಾ. ಪೀಟರ್ ಪೌಲ್ ಸಲ್ದಾನಾ, ಮೌಲಾನಾ ಅಬ್ದುಲ್ ಅಝೀಝ್ ದಾರಿಮಿ ಸಹಿತ ಈ ಭಾಗದ ಜನ ಪ್ರತಿನಿಧಿಗಳು ಭಾಗವಹಿಸುತ್ತಾರೆ ಅಂದರು.
ಫೆಬ್ರವರಿ 1 ರ ಬೆಳಗ್ಗೆ 10.30 ರಿಂದ ಸ್ಪೀಕರ್ ಯು.ಟಿ. ಖಾದರ್ ಫರೀದ್ ಘನ ಉಪಸ್ಥಿತಿ ಆಯುಷ್ ವೈದ್ಯ ಪದ್ಧತಿಗಳ ಅಭ್ಯುದಯಕ್ಕಾಗಿ ಶ್ರಮಿಸುತ್ತಿರುವ ಹಾಗೂ ಸಮಾಜಮುಖಿ ಸೇವೆಗಳಲ್ಲಿ ತೊಡಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಆಯುಷ್ ರತ್ನ ಪ್ರಶಸ್ತಿಯನ್ನು ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರಿಗೆ, ಆಯುಷ್ ವಿಭೂಷಣ ಪ್ರಶಸ್ತಿಯನ್ನು ಡಾ.ಎಂ.ಮೋಹನ್ ಆಳ್ವ ಇವರಿಗೆ ನೀಡಿ ಗೌರವಿಸಲಾಗುತ್ತದೆ. ಹಾಗೂ ಆಯುಷ್ ಭೂಷಣ, ಶ್ರೀ ಆಯುಷ್ ಯುವ ಶ್ರೀ ಪ್ರಶಸ್ತಿಗಳು ವಿವಿಧ ಕ್ಷೇತ್ರಗಳ ಗಣ್ಯರಿಗೆ ನೀಡಿ ಅಭಿನಂದಿಸಲಾಗುವುದೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಡಾ ಕೇಶವ ಪಿ ಕೆ , ಸಂಘಟನಾ ಕಾರ್ಯದರ್ಶಿ ಡಾ ಸಚಿನ್ ನಡ್ಕ, ಸದಸ್ಯರಾದ ಡಾ ಪ್ರವೀಣ್ ರೈ ಉಪಸ್ಥಿತರಿದ್ದರು.

  • ವರದಿ: ಶಂಶೀರ್ ಬುಡೋಳಿ
RELATED ARTICLES
- Advertisment -
Google search engine

Most Popular